ಕ್ರೀಡೋತ್ಸಾಹದಿಂದ ಮಾನಸಿಕ ಸಬಲತೆ - ಎಂ. ಸಿ. ಕೊಳ್ಳಿ
Mental strength through sportsmanship - M. C. Kolli
ಹಾವೇರಿ26: ನಿತ್ಯ ಬದುಕಿನಲ್ಲಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸದೃಢತೆ ಹೊಂದಲು ಸಾಧ್ಯವಾಗುವುದಲ್ಲದೇ ಕ್ರೀಡೋತ್ಸಾಹದಿಂದ ಮಾನಸಿಕ ಸಬಲತೆ ಉಂಟಾಗುತ್ತದೆ ಎಂದು ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ. ಸಿ. ಕೊಳ್ಳಿ ಹೇಳಿದರು.
ಅವರು ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಹಾವೇರಿ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಕ್ರೀಡೆಗಳನ್ನು ಸ್ಪರ್ಧಾ ಮನೋಭಾವನೆಯಿಂದ ತೆಗೆದುಕೊಳ್ಳಬೇಕು. ಆಟದಲ್ಲಿ ಸೋಲು-ಗೆಲವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯವೆನಿಸುವುದು. ನಮ್ಮ ಕಾಲೇಜಿನಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿ ಯಶಸ್ಸುಗೊಳ್ಳಲೆಂದು ಆಶಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾನಗಲ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಹಾವೇರಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಎಂ. ಎಚ್. ಹೊಳೆಯಣ್ಣನವರ ಮಾತನಾಡಿ ಭಾರತದ ಬಹುತೇಕ ಕ್ರೀಡೆಗಳು ಇಂದು ವಿದೇಶ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಸಂತೋಷದ ವಿಷಯವಾಗಿದೆ. ನಮ್ಮ ನೆಲದ ಆಟೋಟಗಳು ಸಾಮರ್ಥ್ಯ ಮತ್ತು ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿಗಳಾಗಿವೆ ಎಂದರು.
ಇನ್ನೋರ್ವ ಅತಿಥಿ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹಾಗೂ ಹಾವೇರಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ರಮೇಶ್ ತೆವರಿ ಮಾತನಾಡಿ ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಗೀಳಿಗೆ ಒಳಗಾಗಿ ಕ್ರೀಡಾಭಾವನೆಯಿಂದ ಹೊರಗುಳಿಯುತ್ತಿರುವುದು ನೋವಿನ ಸಂಗತಿಯಾಗಿದೆ. ನಿತ್ಯದ ಕ್ರಿಯಾಶೀಲ ಬದುಕಿಗೆ ಕ್ರೀಡೆ ಸಹಕಾರಿಯಾಗಿದ್ದು, ಆಟೋಟಗಳು ಮನಸ್ಸಿನ ಮೇಲೆ ಅಪಾರ ಪರಿಣಾಮ ಬೀರುತ್ತವೆ. ಇಂತಹ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುವತ್ತ ಇಂದಿನ ಯುವಕರು ಮನಸ್ಸು ಮಾಡಬೇಕಿದೆ ಎಂದರು.
ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಎಸ್. ಎಂ. ಹುರಳಿಕುಪ್ಪಿ, ಹಾವೇರಿ ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಪ್ರಭಾರ ನಿರ್ದೇಶಕ ಸಿ. ಎನ್. ಸೊರಟೂರ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಜೆ. ಆರ್. ಶಿಂಧೆ, ನಿವೃತ್ತ ಪ್ರಾಧ್ಯಾಪಕ ಡಾ. ಜಗದೀಶ ಹೊಸಮನಿ ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರೊ. ನಯನಾ ಪ್ರಾರ್ಥಸಿದರು. ಕ್ರೀಡಾ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಎಸ್. ಆರ್. ನಾಯಕ ಸ್ವಾಗತಿಸಿದರು. ಪ್ರೊ. ಶ್ರೀದೇವಿ ದೊಡ್ಡಮನಿ ನಿರ್ವಹಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ. ವಂದಿಸಿದರು. ಪಂದ್ಯಾವಳಿಯಲ್ಲಿ ಹಾನಗಲ್ಲ, ಹಾವೇರಿ, ಶಿಗ್ಗಾಂವ, ಬಂಕಾಪುರ, ಅಕ್ಕಿಆಲೂರ, ಬ್ಯಾಡಗಿ ಕಾಲೇಜುಗಳ ಮಹಿಳಾ ತಂಡಗಳು ಭಾಗವಹಿಸಿದ್ದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 