ಮೈಕ್ರೋ ಫೈನಾನ್ಸ್ ಕಿರುಕುಳ: ಆತ್ಮಹತ್ಯೆಗೆ ಶರಣಾದ ಮಹಿಳೆ
Microfinance harassment: Woman commits suicide
ಬೆಳಗಾವಿ 22: ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವಿವಾಹಿತ ಮಹಿಳೆ ಓರ್ವಳು ಗೋಡೆ ಮೇಲೆ ಡೆತ್ ನೋಟ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಆನಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರವ್ವ ನೀಲ್ಲಪ ಕೆಂಗಾನೂರ(36) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ತಂಗಿಯನ್ನ ಚೆನ್ನಾಗಿ ನೋಡಿಕೋ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ. ವಿವಿಧ ಮೈಕ್ರೋ ಫೈನಾನ್ಸ್ನಲ್ಲಿ 7ರಿಂದ 10 ಲಕ್ಷದವರೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ನಿಂದ ನಿರಂತರ ಕಿರುಕುಳ ಮಾಡಿರುವ ಆರೋಪ ಇರುವ ಹಿನ್ನೆಲೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆ ಆತ್ಮಹತ್ಯೆ ಹಿನ್ನೆಲೆ ಕುಟುಬಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 