ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮ
Milk Pilot Project Implementation Program
ವಿಜಯಪುರ 07: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ನಾಳೆ ನವೆಂಬರ್ 8 ರಂದು ಶನಿವಾರ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಶನಿವಾರ ಮಧ್ಯಾಹ್ನ 12.30 ಗಂಟೆಗೆ ನಗರದ ಬಿ.ಎಲ್.ಡಿ.ಇ ಸಂಸ್ಥೆ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿರುವ ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಸ್ಪತ್ರೆಯಲ್ಲಿ ಬೆಂಗಳೂರಿನ ಆಶ್ರಯ ಹಸ್ತಾ ಟ್ರಸ್ಟ್ ವತಿಯಿಂದ ರೂ.1.50 ಕೋಟಿ ಧನ ಸಹಾಯದಿಂದ ಹೈದರಾಬಾದನ ಸುಶೇನಾ ಹೆಲ್ತ್ ಫೌಂಡೇಶನ್ ಸಹಯೋಗದಲ್ಲಿ ನಿರ್ಮಿಸಿರುವ ಧಾತ್ರಿ ಹಾಲುಣಿಸುವಿಕೆ ನಿರ್ವಹಣೆ ಕೇಂದ್ರ ಮತ್ತು ಮಿಲ್ಕ್ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಧನ್ಯವಾದಗಳು.ಡಾ. ಮಹಾಂತೇಶ ಬಿರಾದಾರ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 