ಕಾರವಾರ 03: ವಿದ್ಯುತ್ ಶಾಟರ್್ ಸಕ್ಯರ್ೂಟ್ನಿಂದ ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಗೃಹ ಬಳಕೆ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಶಿರವಾಡದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸೋಮವಾರ ಸಂಭವಿಸಿದೆ.
ಇಂಡಸ್ಟ್ರೀಯಲ್ ಏರಿಯಾದ ಕೃಷ್ಣಪ್ಪ ಹನುಮಂತಪ್ಪ ಬರಡಿ ಎನ್ನುವವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಮನೆಯಲ್ಲಿ ಬಾಡಿಗೆದಾರರಾಗಿದ್ದ ಅರವಿಂದ ಕೊಚ್ರೇಕರ್ ಅವರಿಗೆ ಸೇರಿದ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಗೀಡಾಗಿದೆ.
ಬೆಳಗ್ಗೆ ಮನೆಯಿಂದ ಅರವಿಂದ ಹೊರಹೋಗಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಬಟ್ಟೆ, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ 2 ಲಕ್ಷ ರೂ.ಗಿಂತ ಅಧಿಕ ಹಾನಿ ಸಂಭವಿಸಿದೆ ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಿಳಿಸಿದರು.
ಮನೆಯಿಂದ ಕಪ್ಪು ಹೊಗೆ ಹೊರಸೂಸುವ ಜೊತೆಗೆ, ಸುಟ್ಟ ವಾಸನೆ ಬರುವುದನ್ನು ಗಮನಿಸಿದ ಪಕ್ಕದಲ್ಲಿದ್ದ ಮಾಲಕರು ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.