ಧ್ವಜದಡಿ ಒಂದಾದ ಮನಗಳು “77ನೇ ಗಣರಾಜ್ಯೋತ್ಸವಮುಂಡಗೋಡದಲ್ಲಿ ದೇಶಭಕ್ತಿಯ ಬೆಳಕು”
Minds united under the flag “77th Republic Day, the light of patriotism in Mundagoda”
ಮುಂಡಗೋಡ 27: ರಾಷ್ಟ್ರಧ್ವಜ ಹಾರಿದ ಕ್ಷಣದೊಂದಿಗೆ ದೇಶಭಕ್ತಿ ಮಿಡಿದ ಹೃದಯಗಳು, ಸಂವಿಧಾನದ ಮೌಲ್ಯಗಳನ್ನು ನೆನಪಿಸುವ ಸಂಭ್ರಮದ ವಾತಾವರಣ. ಇಂತಹ ಭಾವಪೂರ್ಣ ಕ್ಷಣಗಳಿಗೆ ಮುಂಡಗೋಡ ಪಟ್ಟಣದ ತಾಲೂಕಾ ಕ್ರೀಡಾಂಗಣ ಸೋಮವಾರ ಸಾಕ್ಷಿಯಾಯಿತು.ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಬೆಳಿಗ್ಗೆ 9.20ಕ್ಕೆ ತಹಶೀಲ್ದಾರ ಶಂಕರ ಗೌಡಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ರಾಷ್ಟ್ರಧ್ವಜ ಗಗನಕ್ಕೆ ಏರಿದ ಕ್ಷಣದಲ್ಲಿ ದೇಶಭಕ್ತಿಯ ಘೋಷಣೆಗಳು ಮೊಳಗಿದ್ದು, ಕ್ರೀಡಾಂಗಣದ ವಾತಾವರಣವೇ ಭಾವನಾತ್ಮಕವಾಗಿ ಕಂಪಿಸಿತು.ಕಾರ್ಯಕ್ರಮಕ್ಕೆ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಅವರ ಆದರ್ಶಗಳನ್ನು ಸ್ಮರಿಸಲಾಯಿತು. ಧ್ವಜಾರೋಹಣದ ನಂತರ ತಹಶೀಲ್ದಾರ ಶಂಕರ ಗೌಡಿ ಮಾತನಾಡಿ,
“ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಭರವಸೆ ನೀಡುತ್ತದೆ. ಜಾತಿ, ಭಾಷೆ, ಪ್ರದೇಶ ಮತ್ತು ಲಿಂಗದ ಭೇದವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದು ಸಂವಿಧಾನದ ಮೂಲ ತತ್ವ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ನಮ್ಮ ಸಂವಿಧಾನವೇ ಅದರ ಬಲಿಷ್ಠ ಅಡಿಪಾಯವಾಗಿದೆ. 1949ರ ನವೆಂಬರ್ 26ರಂದು ಸಂವಿಧಾನ ಅಂಗೀಕಾರಗೊಂಡು, 1950ರ ಜನವರಿ 26ರಂದು ಜಾರಿಗೆ ಬಂದಿತು. ಈ ದಿನವನ್ನು ದೇಶಾದ್ಯಂತ ಪೂರ್ಣ ಸ್ವರಾಜ್ಯದ ದಿನವಾಗಿ ಆಚರಿಸಲಾಗುತ್ತದೆ,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಶೋಕ ಚಲವಾದಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಲ್.ಟಿ. ಪಾಟೀಲ್,ಅವರು ಮಾತನಾಡಿ, ಗಣರಾಜ್ಯೋತ್ಸವದ ಮಹತ್ವ ಹಾಗೂ ಸಂವಿಧಾನದ ಮೌಲ್ಯಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಶಂಕರ ಗೌಡಿ, ಸಿಪಿಐ ರಂಗನಾಥ ನೀಲಮ್ಮನವರ, ಬಿಇಒ ಸುಮಾ ಜಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಲ್.ಟಿ. ಪಾಟೀಲ್, ರಹಿಮಾಬಾನು ಕುಂಕೂರ, ಅಶೋಕ ಚಲವಾದಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಷ್ಟ್ರಭಕ್ತಿಯ ಮನೋಭಾವದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 