ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಜ. 20ರಂದು ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಭೇಟಿ
Minister B.Z. Zameer Ahmed Khan visited Gadag District Congress Office on Jan. 20
ಗದಗ 20: ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಜನವರಿ 20ರಂದು ಮಧ್ಯಾಹ್ನ 3 ಗಂಟೆಗೆ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಉಪಸ್ಥಿತರಿರುವರು.ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 