ಸಚಿವ ಬೋಸರಾಜು ಅವರ ಪ್ರವಾಸ ಕಾರ್ಯಕ್ರಮ
ಗದಗ 15: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಮಾರ್ಚ 16 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ: ಮಾರ್ಚ 16 ರಂದು ಬೆ 10.40 ಗಂಟೆಗೆ ಗದುಗಿಗೆ ಆಗಮಿಸಿ ಬೆ 11 ಗಂಟೆಗೆ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಕೆ.ಎಚ್.ಪಾಟೀಲ್ ರವರ ಜನ್ಮ ಶತಮಾನೋತ್ಸವ ಆಚರಣೆ ಮತ್ತು ದಿ ಗದಗ ಕೋ ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.