ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

Minister H.K. Patil inaugurates the District Government Employees' Sports Meet

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

ಗದಗ 22: ಕ್ರೀಡಾ ಅಭಿರುಚಿ ಮೈಗೂಡಿಸಿಕೊಂಡು ಆರೋಗ್ಯಯುತ ಜೀವನಶೈಲಿಯನ್ನು ರೂಡಿಸಿಕೊಳ್ಳಿ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌. ಕೆ.ಪಾಟೀಲ ಅವರು ಕರೆ ನೀಡಿದರು. 

2024-25ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಅಭಿರುಚಿ, ಆರೋಗ್ಯ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿನೌಕರರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕ್ರೀಡಾ ಅಭ್ಯಾಸದ ಮೂಲಕ ನೌಕರರು ಶಾರೀರಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಉಳಿಸಿಕೊಳ್ಳಬಹುದಾಗಿದೆ. ಟೆನ್ನಿಸ್ ಕೋರ್ಟ್‌ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅದು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು. 

ವಿಧಾನ ಪರಿಷತ್ ಸದಸ್ಯ ಎಸ್‌.ವಿ. ಸಂಕನೂರ ಮಾತನಾಡಿ, ಸರ್ಕಾರಿ ನೌಕರರು ದಿನನಿತ್ಯದ ಕೆಲಸದ ಒತ್ತಡವನ್ನು ಸಮರ​‍್ಕವಾಗಿ ನಿರ್ವಹಿಸಲು ಕ್ರೀಡಾ ಚಟುವಟಿಕೆಗಳು ಅವಶ್ಯಕ. ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ವಾಕ್, ಧ್ಯಾನ ಮತ್ತು ಯೋಗದ ಅಭ್ಯಾಸ ಮಾಡಬೇಕು. ಇದರಿಂದ ಒತ್ತಡ ನಿವಾರಣೆ ಹಾಗೂ ಕೆಲಸದ ಕಾರ್ಯಕ್ಷಮತೆ ಹೆಚ್ಚಲು ಸಹಾಯವಾಗುತ್ತದೆ" ಎಂದು ಸಲಹೆ ನೀಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷರಾದ ಡಾ. ರವಿ ಗುಂಜೀಕರ ಮಾತನಾಡಿ, ಹಿಂದಿನ ಕ್ರೀಡಾಕೂಟದಲ್ಲಿ ನಮ್ಮ ಜಿಲ್ಲೆಯ ನೌಕರರು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೆಸರು ತಂದಿದ್ದಾರೆ. ಈ ವರ್ಷವೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಗೆ ಕೀರ್ತಿ ತರುವಂತೆ ಪ್ರೇರೇಪಿಸೋಣ ಎಂದು ಹೇಳಿದರು.ಈ 2024-25ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್‌ 22 ಮತ್ತು 23, 2025 ರಂದು ನಡೆಯಲಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ, ರಾಜ್ಯ ಪರಿಷತ್ ಸದಸ್ಯ ಡಿ.ಟಿ. ವಾಲ್ಮೀಕಿ, ಜಿಲ್ಲಾ ಖಜಾಂಜಿ ಎಂ.ಎಂ. ನಿಟ್ಟಾಲಿ, ಜಿಲ್ಲಾ ಕಾರ್ಯದರ್ಶಿ ಡಾ. ಬಸವರಾಜ ಬಳ್ಳಾರಿ, ಗೌರವಾಧ್ಯಕ್ಷ ಡಿ.ಎಸ್‌. ತಳವಾರ, ಕಾರ್ಯಾಧ್ಯಕ್ಷ ಸಿದ್ದಪ್ಪ ಲಿಂಗಧಾಳ, ಹಿರಿಯ ಉಪಾಧ್ಯಕ್ಷ ಮಾರುತಿ ಮಂಗಳಾಪೂರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.ಕಳೆದ ವರ್ಷ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಕೆ. ಪಾಟೀಲ ಅವರು ಸನ್ಮಾನಿಸಿ, ಅವರ ಸಾಧನೆಯನ್ನು ಶ್ಲಾಘಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸ್ವಾಗತಿಸಿ, ಸಮಾರಂಭವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು.