ಜಿಲ್ಲಾಡಳಿತ ಭವನದಲ್ಲಿ ಹುತಾತ್ಮ ದಿನಾಚರಣೆಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಎಚ್.ಕೆ.ಪಾಟೀಲ
Minister H.K. Patil paid floral tributes to the portrait of Sangolli Rayanna on Martyrdom Day at th
ಗದಗ 26: ಹುತಾತ್ಮ ದಿನಾಚರಣೆ ಅಂಗವಾಗಿ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿ ಸೋಮವಾರದಂದು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಎಂ,ಶರಣು ಗೊಗೇರಿ, ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.
ಗದಗ ಜಿಲ್ಲಾಡಳಿತದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ದ್ವಜಾರೋಹಣ ನೆರವೇರಿಸಿ ಅಧಿಕಾರಿಗಳಿಗೆ ಸಂವಿಧಾನದ ಮೌಲ್ಯಗಳ ಪಾಠಗದಗ 26: ಗದಗ ಜಿಲ್ಲಾಡಳಿತದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ದ್ವಜಾರೋಹಣ ನೆರವೇರಿಸಿ, ಸಂವಿಧಾನದ ಮಹತ್ವ ಮತ್ತು ಸರ್ಕಾರಿ ನೌಕರರ ಕರ್ತವ್ಯಗಳ ಕುರಿತು ಮಹತ್ವದ ಸಂದೇಶ ನೀಡಿದರು.ಭಾಷಣದಲ್ಲಿ ಅವರು, ನಾವು ಕಾನೂನು ಹಾಕಿಕೊಂಡು ನಡೆಯುತ್ತಿರುವವರು. ನಾವು ಹೇಗೆ ಕಾನೂನಾತ್ಮಕವಾಗಿ ಬದುಕಬೇಕು ಎಂಬುದನ್ನು ಸಂವಿಧಾನ ನಮಗೆ ತಿಳಿಸುತ್ತದೆ. ವೇದಗಳಲ್ಲಿ ಜೀವನದ ಸಾರಾಂಶ ಇರುವಂತೆ, ಸಂವಿಧಾನದಲ್ಲೂ ನಮ್ಮ ಜೀವನದ ಮೌಲ್ಯಗಳು ಅಡಗಿವೆ ಎಂದು ಹೇಳಿದರು.
ವ್ಯವಸ್ಥೆಯಲ್ಲಿ ಸರ್ಕಾರದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಕಾಯಾಂರ್ಗದ ಮೇಲಿದೆ. ನಾವು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಅವರು ತಿಳಿಸಿದರು. ಅಧಿಕಾರಿಗಳು ತಮ್ಮ ಕಾರ್ಯನಿರ್ವಹಣೆಯಲ್ಲಿ ಮಾನವೀಯತೆಯನ್ನು ಅಳವಡಿಸಿಕೊಂಡು, ಸಾರ್ವಜನಿಕರಿಗೆ ಸಹಾಯ ಮಾಡಬೇಕು. ನೌಕರಿಯಲ್ಲಿ ಅಹಂ ಹಾಗೂ ಜಂಬ ಬೇಡ.
ನಾಗರೀಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ ಪರಿಹಾರ ಒದಗಿಸುವ ಮನೋಭಾವ ಇರಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.ಕಾನೂನು ಜಾರಿ ಮಾಡುವವರು ನಾವೇ ಆಗಿರುವುದರಿಂದ, ಕಾನೂನಿಗೆ ಮಾನವೀಯತೆಯ ನೆಲೆ ಸೇರಿಸಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ನಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಂಡು ಜನಸೇವೆ ಮಾಡೋಣ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಪ್ರಮುಖಾಂಶಗಳು :*ಗಣರಾಜ್ಯೋತ್ಸವ ಅಂಗವಾಗಿ ಗದಗ ಜಿಲ್ಲಾಡಳಿತದಲ್ಲಿ ದ್ವಜಾರೋಹಣ*ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರರಿಂದ ದ್ವಜಾರೋಹಣ*ಸಂವಿಧಾನವೇ ನಮ್ಮ ಜೀವನ ಮಾರ್ಗದರ್ಶಿ” ಹಿ ಜಿಲ್ಲಾಧಿಕಾರಿ*ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆ ಮುಖ್ಯ ಎಂದು ಕರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 