ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರೀಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್
Minister Lakshmi Hebbalkar, Channaraj, Mrinal reviewed the preparations for the birthday program
ಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸ್ಥಳಕ್ಕೆ ತೆರಳಿ ಕಾರ್ಯಕ್ರಮದ ಸಿದ್ಧತೆಯನ್ನು ಪರೀಶೀಲಿಸಿದರು.
ಹಿರಿಯ ನಾಗರಿಕರಿಗಾಗಿ ವಿವಿಧ ಮೋಜಿನ ಆಟಗಳು, ಸಂವಾದ, ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಸಾವಿರ ಹಿರಿಯ ನಾಗರಿಕರು ಸೇರಿದಂತೆ 20 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನೀರೀಕ್ಷೆ ಇದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಕ್ರಮದ ಪೆಂಡಾಲ್, ಊಟದ ವ್ಯವಸ್ಥೆ, ಆಟಕ್ಕಾಗಿ ಮಾಡಲಾಗಿರುವ ತಯಾರಿ ಸೇರಿದಂತೆ ಎಲ್ಲವನ್ನೂ ಪರೀಶೀಲಿಸಿ, ಮಾರ್ಗದರ್ಶನ ನೀಡಿದರು. ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲು ಬೇಕಾದ ಸಿದ್ಧತೆ ಮಾಡುಕೊಳ್ಳುವಂತೆ ಸೂಚಿಸಿದರು.
ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸಹ ಈ ಸಂದರ್ಭದಲ್ಲಿ ಇದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಸ್ಥಳಕ್ಕೆ ತೆರಳಿ ಸಿದ್ಧತೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಹಿರಿಯ ನಾಗರಿಕರನ್ನು ತಮ್ಮ ಮಾರ್ಗದರ್ಶಕರು, ಸಮಾಜದ ಆಸ್ತಿ ಎಂದು ಪರಿಗಣಿಸಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, ಅವರಲ್ಲಿ ಜೀವನೋತ್ಸಾಹ ತುಂಬುವ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದಾರೆ. ಮೋಜಿನ ಆಟದ ನಂತರ ಸಭಾ ಕಾರ್ಯಕ್ರಮ ಸಹ ನಡೆಯಲಿದ್ದು, ವಿವಿಧ ಮಠಾಧೀಶರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 