ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ: ಸಚಿವ ನಾರಾಯಣಗೌಡ ಸ್ಪಷ್ಟನೆ
ಬೆಂಗಳೂರು, ಮೇ 28,ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.ನಿನ್ನೆ ಮಂಡ್ಯದಲ್ಲಿ ತಾವು ಆಡಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು 14 ಜನ ಸೇರಿ ಅಲ್ಲಿ ಸಭೆ ಮಾಡಿದ್ದರು. ಈ ವೇಳೆ ಮಾವಿನ ಹಣ್ಣನ್ನು ಕಟ್ ಮಾಡಿ ಹಂಚಿಕೊಂಡು ತಿಂದಿದ್ದರು. ಇದರಿಂದಾಗಿ ಅವರೆಲ್ಲರಿಗು ಪರಸ್ಪರ ಸೋಂಕು ಹರಡಿರಬಹುದು ಎಂದೂ, ಅವರನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದೆ. ಮಾವಿನ ಹಣ್ಣಿನಿಂದ ಕೊರೋನಾ ಬರಲ್ಲ. ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 