ಗಾಯಾಳುಗಳ ಯೋಗ ಕ್ಷೇಮ ವಿಚಾರಸಿದ ಸಚಿವ ಪಾಟೀಲ
ಶಿಗ್ಗಾವಿ 25 : ಯಲ್ಲಾಪೂರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸವಣೂರ ತಾಲೂಕಿನ 19 ಜನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗ ಕ್ಷೇಮ ವಿಚಾರಸಿ ಅವರಿಗೆ ದೈರ್ಯವನ್ನು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತುಂಬಿದರು. ಅಲ್ಲದೇಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಪೂರ್ಣ ಭರಿಸಲಿದೆ ಎಂದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಶಾಸಕ ಯಾಶೀರಖಾನ ಪಠಾಣ, ಗಡಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ , ಎಸ್.ಟಿ. ಮುಖಂಡ ಡಾ. ಬಸವರಾಜ ದೊಡ್ಡಮನಿ, ಕಿಮ್ಸನ ತಜ್ಞ ವೈದ್ಯರು ಸೇರಿದಂತೆ ತಾಲೂಕಿನ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.