ಸಮಸ್ಯೆ ತೆರೆದಿಟ್ಟ ಕಡಾಡಿ: ಸಚಿವ ಪಾಟೀಲ ಶ್ಲಾಘನೆ
Minister Patil praises Kadadi for raising the issue
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಿಜೆಪಿಯ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಕೆಲ ಬೇಡಿಕೆಗಳನ್ನುಈಡೇರಿಸಲು ಕೇಂದ್ರ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.
ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿರುವ ಹಾಗೂ ರಾಜ್ಯ ಸರ್ಕಾರವನ್ನು ಟೀಕೆ ಮಾಡುವ ಬಿಜೆಪಿ ಮುಖಂಡರು ಕಡಾಡಿ ಅವರು ಪ್ರಸ್ತಾಪ ಮಾಡಿರುವ ವಿಷಯಗಳನ್ನು ಗಮನಿಸಬೇಕು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಈರಣ್ಣ ಕಡಾಡಿ ಅವರು ಪ್ರಸ್ತಾಪ ಮಾಡಿರುವ ವಿಚಾರಗಳನ್ನೇ ರಾಜ್ಯ ಸರ್ಕಾರ ಹೇಳುತ್ತಿದೆ. ಕೇಂದ್ರ ಸರ್ಕಾರ ಕಬ್ಬಿಗೆ ಎಫ್ಆರ್ಿ ಹೆಚ್ಚಳ ಮಾಡಿದಂತೆ ಸಕ್ಕರೆಯ ಎಂಎಸ್ಪಿಯನ್ನೂ ಹೆಚ್ಚಳ ಮಾಡಬೇಕು. ಆದರೆ 2019 ರಿಂದ ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡಿಲ್ಲ, ಸಕ್ಕರೆ ರಫ್ತು ಮಾಡಲು ಸಕಾಲಕ್ಕೆ ಅನುಮತಿ ನೀಡುತ್ತಿಲ್ಲ. ಎಥೆನಾಲ್ ಉತ್ಪಾದನೆ ಪ್ರಮಾಣ ಹೆಚ್ಚಳ ಮಾಡುತ್ತಿಲ್ಲ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹೇಳುತ್ತಿರುವ ವಿಚಾರಗಳನ್ನೇ ಈರಣ್ಣ ಕಡಾಡಿ ಅವರು ಪ್ರಸ್ತಾಪ ಮಾಡಿದ್ದಾರೆ. ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸಿದರೆ ಕಬ್ಬಿಗೂ ಒಳ್ಳೆಯ ಬೆಲೆ ಕೊಡಲು ಸಾಧ್ಯವಾಗುತ್ತದೆ. ಸಕ್ಕರೆ ಉದ್ಯವೂ ಉಳಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಒಪ್ಪಿಕೊಂಡಿವೆ. ಕಳೆದ ಹಂಗಾಮಿಗೆ ಹೋಲಿಕೆ ಮಾಡಿದರೆ ಈ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ 300 ರೂ. ಹೆಚ್ಚುವರಿ ಕೊಡಿಸಲಾಗಿದೆ. ರಾಜ್ಯ ಸರ್ಕಾರ ಸಕ್ಕರೆ ಉದ್ದಿಮೆ ಲಾಬಿಗೆ ಮಣಿದಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಲಾಬಿಗೆ ಮಣಿದಿದ್ದರೆ ಕಳೆದ ಹಂಗಾಮಿಗಿಂತ ಈ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ 300 ರೂ. ಹೆಚ್ಚುವರಿ ಕೊಡಿಸಲು ಸಾಧ್ಯವಾಗುತ್ತಿತ್ತೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕಬ್ಬು ಬೆಳೆಗಾರರ ಹೋರಾಟದ ಸಂದರ್ಭದಲ್ಲಿ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಗಳು ಕರೆದಿದ್ದ ಸಕ್ಕರೆ ಕಾರ್ಖಾನೆಗಳು ಮತ್ತು ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು, ರಾಜಕಾರಣ ಮಾಡದೆ ಕೇಂದ್ರ ಸರ್ಕಾರ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಬಗ್ಗೆ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದರು. ಶುಕ್ರವಾರ ಸಂಸತ್ ಕಲಾಪದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡಾ ಗಮನ ಸೆಳೆದಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 