ಸಚಿವ ಪ್ರಹ್ಲಾದ ಜೋಶಿ ಕಬ್ಬು ಬೆಳಗಾರರ ಕಷ್ಟಕ್ಕೆ ಸ್ಪಂದಿಸಲು ಮನವಿ
Minister Prahlad Joshi appeals to respond to the hardships of sugarcane growers
ವಿಜಯಪುರ 06: ಕರ್ನಾಟಕ ರಾಜ್ಯದಲ್ಲಿ ಕಬ್ಬಿನ ಬೆಳೆಗಾರರ ಹೋರಾಟಕ್ಕೆ ಕೇವಲ ರಾಜ್ಯ ಸರಕಾರ ಮಾತ್ರ ಕಾರಣವಲ್ಲ, ಕೇಂದ್ರ ಸರಕಾರವು ಕೂಡಾ ಕಾರಣ ಕೂಡಲೇ ಕರ್ನಾಟಕ ಪ್ರತಿನಿಧಿಸುವ ಸಚಿವ ಪ್ರಹ್ಲಾದ ಜೋಶಿ ಅವರು ರೈತ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಆಗ್ರಹಿಸಿದರು.
ಅವರು ವಿಜಯಪುರ ನಗರದ ಗಗನ ಮಹಲ್ ಮುಂದೆ ನಡೆಯುತ್ತಿರುವ ಕಬ್ಬಿನ ಬೆಳೆಗಾರರಿಂದ ಕಬ್ಬಿನ ಬೆಲೆಗೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಬೆಂಬಲಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಸಕ್ಕರೆ ಸಚಿವರಾದ ಪ್ರಹ್ಲಾದ ಜೋಶಿ ರೈತರ ಹೋರಾಟವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ರಾಜ್ಯದ ಕಡೆಗೆ ಬೊಟ್ಟು ಮಾಡುವುದನ್ನು ಬಿಟ್ಟು ಎಫ್ ಆರ್ ಪಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ಬೆಲೆ ನಿಗದಿ ವಿಷಯದಲ್ಲಿ ರಾಜ್ಯ ಸರಕಾರಗಳ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಕೂಡಲೇ ರಾಜ್ಯದ ರೈತರ ಹೋರಾಟಕ್ಕೆ ಬೆಲೆ ಕೊಟ್ಟು ನ್ಯಾಯ ಒದಗಿಸಬೇಕು ಎಂದು ಹೇಳಿದ ಅವರು, ಒಂದು ವೇಳೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 