ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಜಾಹಿರಾತನ್ನು ಪ್ರಚಾರ ಮಾಡದಿರಲು ಸಚಿವ ರಾಮಲಿಂಗಾ ರೆಡ್ಡಿಯವರ ಸೂಚನೆ
Minister Ramalinga Reddy instructs not to promote advertisements that encourage the consumption of
ದಾಂಡೇಲಿ ಫೆ 6 : ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತನ್ನು ನಿರ್ಭಂಧಿಸುವ ಬಗ್ಗೆ ಸರ್ಕಾರ ಸೂಚಿಸಿದ್ದರೂ, ಬಸ್‌ಗಳಲ್ಲಿ ವಿಮಲ್ ತಂಬಾಕು ಉತ್ಪನ್ನಗಳ ಜಾಹೀರಾತನ್ನು ಅಂಟಿಸಿರುವದನ್ನು ದಾಂಡೇಲಿಯ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ತೆಗೆದು ಹಾಕುವ ಮೂಲಕ ಸ್ಥಳೀಯ ಕರವೇ (ಪ್ರವೀಣ ಶೆಟ್ಟಿ) ಬಣದಿಂದ ಪ್ರತಿಭಟಿಸಲಾಯಿತು. ಈ ಕುರಿತು ಕರವೇ (ಪ್ರವೀಣ ಶೆಟ್ಟಿ) ಬಣದ ಜಿಲ್ಲಾಧ್ಯಕ್ಷ ಪ್ರವೀಣ ಕೋಠಾರಿ ಮಾತನಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಈಗಾಗಲೇ ಸಾರಿಗೆ ಇಲಾಖೆಯ ಅಧಿಕಾರಿಗೆ ತಿಳಿಸಲಾಗಿದೆ.
ಅವರು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿಯವರು ಈ ಬಗ್ಗೆ ಕಟ್ಟಿ ನಿಟ್ಟಾದ ಆದೇಶವನ್ನು ಮಾಡಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ, ಬಸ್‌ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಅಥವಾ ಪರೋಕ್ಷವಾದ ಯಾವುದೇ ಜಾಹಿರಾತನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್‌ಗಳಲ್ಲಿ , ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ ಆ ನಿಗದಿತ ಸಮಯದೊಳಗೆ ಜಾಹೀರಾತನ್ನು ತೆಗೆದು ಹಾಕುವಂತೆ ಆದೇಶಿಸಿದ್ದಾರೆ. ಈ ಆದೇಶದ ಪಾಲನೆಯಾಗಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಪ್ರವೀಣ ಕೋಠಾರಿ ಆಗ್ರಹಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 