ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾಕ್ಕೆ ಸಚಿವ ಜಮೀರ್ ಚಾಲನೆ
ಹಾವೇರಿ25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ "ಬೇಟಿ ಬಚಾವೋ ಬೇಟಿ ಪಡಾವೋ" ಸಪ್ತಾಹ ಕಾರ್ಯಕ್ರಮ ಹಾಗೂ ಜಾಥಾಕ್ಕೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಹೆಣ್ಣು ಮಕ್ಕಳ ಕುರಿತಂತೆ ಘೋಷಣೆಗಳನ್ನು ಜಾಗೃತಿ ಮೂಡಿಸಲಾಯಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸಾರ್ವಜನಿಕರ ಗಮನಸೆಳೆಯಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನಮಠದ, ಮಾಜಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 