ಲೋಕದರ್ಶನ ವರದಿ
ಕೊಪ್ಪಳ 28: ಕನರ್ಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಬೃಹತ್ ಪ್ರಮಾಣದಲ್ಲಿ ರಾಜ್ಯಮಟ್ಟದ ಅಲ್ಪಸಂಖ್ಯಾತರ ಸಮಾವೇಶ ದಿ: 04 ರ ಸೊಮುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯ್ಯದ ಮುತರ್ುಜಾ ಹೇಳಿದರು.
ಅವರು ಗುರುವಾರ ಇಲ್ಲಿನ ಪತ್ರಿಕಾಭವನದಲ್ಲಿ ಏರ್ಪಡಿಸಿದ ಪತ್ರಿಕಾಗೊಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸಯೀದ್ ಅಹ್ಮದ್ರವರ ನೇತೃತ್ವದಲ್ಲಿ ಸಮಾವೇಶ ಜರುಗಲಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದವರು ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ ಅಲ್ಪಸಂಖ್ಯಾತರ ಘಟಕದ ರಾಷ್ಠ್ರೀಯ ಅಧ್ಯಕ್ಷ ನದೀಮ್ ಜಾವೀದ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಕಾಯರ್ಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತರರು ಮುಖ್ಯಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾವೇಶದಲ್ಲಿ ಸಚಿವರು, ಶಾಸಕರು, ಸಮುದಾಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಅಲ್ಪಸಂಖ್ಯಾತ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೆಶ ಯಶಸ್ವಿಗೊಳಿಸಲು ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯ್ಯದ ಮುತರ್ುಜಾ ಹೇಳಿದರು. ಅವರೊಂದಿಗೆ ಅಮ್ಜದ್ ಮೆಹೆಮೂದ್, ಹೊನ್ನುರಸಾಬ್, ಮುನೀರ್ ಸಿದ್ಧಿಖಿ, ಚಾಂದ್ ಪಾಷಾ ಕಿಲ್ಲೆದಾರ್, ಸಯ್ಯದ್ ಗೌಸ್ ಹುಸೇನಿ, ಮತ್ತಿತರರು ಉಪಸ್ಥಿತರಿದ್ದರು.