ನವದೆಹಲಿ, ಫೆ 4 - ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಬೆಂಬಲಿಸಿರುವ ಜೆಡಿಯು ಸದಸ್ಯ ರಾಜೀವ್ ರಂಜನ್ ಸಿಂಗ್, ಹೊಸ ಕಾನೂನಿಗೆ ವಿರೋಧ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ.
ಲೋಕಸಭೆಯಲ್ಲಿ ಮಂಗಳವಾರ ಸಂಸತ್ ನಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಂಗ್ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿದಾಗ ಯಾರೊಬ್ಬರೂ ವಿರೋಧಿಸಿರಲಿಲ್ಲ. ಆದರೆ, ಈಗ ಏಕೆ ವಿರೋಧಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.
ಸಿಎಎ ಕುರಿತು ದಾರಿ ತಪ್ಪಿಸುವ ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಇನ್ನೂ ಅಸ್ತಿತ್ವಕ್ಕೆ ಬಾರದ ಎನ್‍ಆರ್ ಸಿಯನ್ನು ಸಿಎಎಗೆ ಏಕೆ ಜೋಡಿಸಲಾಗುತ್ತಿದೆ? ಎಂದು ಸಿಂಗ್ ಆಶ್ಚರ್ಯ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ‘ಸಬ್ ಕ ಸಾಥ್ -ಸಬ್ ಕ ವಿಕಾಸ್, ಸಬ್ ಕ ವಿಶ್ವಾಸ್ ಘೋಷಣೆಯನ್ನು ಉಲ್ಲೇಖಿಸಿದ ಅವರು, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಮತ್ತು ವಿಶೇಷ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು.ದೇಶದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸುವಂತೆ ಸಿಂಗ್ ಒತ್ತಾಯಿಸಿದರು.ನ್ಯಾಷನಲ್ ಕಾನ್ಫರೆನ್ಸಸ್ ಸದಸ್ಯ ಹಸ್‍ನೈನ್ ಮಸೂದಿ ಸಹ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.