ಬಾಲಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 24: ನಗರದ ಕಾಕರ್ಲತೋಟ ಹನುಮಾನ್ ನಗರದ 5ನೇ ವಾರ್ಡ್ ನಿವಾಸಿ ಬಸವರಾಜ ಎನ್ನುವ 17 ವರ್ಷದ ಬಾಲಕ ಮಾ.14 ರಂದು ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‌ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಚಹರೆ ಗುರುತು:
5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಬಲ ಕುತ್ತಿಗೆ ಭಾಗದಲ್ಲಿ ರಿಂಗ್ ಆಕಾರದ ಹಚ್ಚೆ ಗುರುತು ಇರುತ್ತದೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್‌ಐ ದೂ.08392-250033, 9480803096 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.