ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 12:ನಗರದ ಮಿಲ್ಲರಪೇಟೆಯ ಪೊಲೀಸ್ ಕ್ವಾಟರ್ಸ್‌ನಲ್ಲಿ ವಾಸವಾಗಿದ್ದ 30 ವರ್ಷದ ಸೈಯದ್ ಎನ್ನುವ ವ್ಯಕ್ತಿ ನ.13 ರಂದು ಕಾಣೆಯಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು: ಎತ್ತರ 5.4 ಅಡಿ, ಸದೃಢ ಮೈಕಟ್ಟು, ಕೆಂಪು ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ವ್ಯಕ್ತಿಯು ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಬ್ರೂಸ್‌ಪೇಟೆ ಪೊಲೀಸ್ ಠಾಣೆ ದೂ.08392-272022, ಪಿ.ಐ ಮೊ.09480803045, ಪಿ.ಎಸ್.ಐ ಮೊ.09480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.