ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ನಿಷೇಧ: ಜಿಲ್ಲಾಧಿಕಾರಿ

ಧಾರವಾಡ.16: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಾಗೂ ಕುಂದಗೋಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಣೆ ಕಾರ್ಯವು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಬಾರಿ ಮತ ಎಣಿಕೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಎಣಿಕೆ ಕೇಂದ್ರಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಹೇಳಿದರು.

         ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಎಣಿಕೆ ಕಾರ್ಯದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು, ಎಣಿಕೆ ಕೇಂದ್ರಕ್ಕೆ ಮೂರು ಹಂತಗಳ ಭದ್ರತೆ, ಸಾರ್ವಜನಿಕರಿಗೆ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಲಾಗುವುದು.

         ಎಣಿಕಾ ಏಜೆಂಟ್ ರು ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳು ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಸಬೇಕು.ಎಣಿಕೆ ಕೌಂಟರುಗಳಿಗೆ ಬರುವುದನ್ನು ನಿಷೇಧಿಸಲಾಗಿದೆ ಎಂದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ  ಮಾತನಾಡಿ, ಬಿಗಿ ಭದ್ರತೆಗೆ ಗುಣಮಟ್ಟದ ಬ್ಯಾರಿಕೇಡ್ ಗಳನ್ನು ಹಾಕಲಾಗುವುದು.ಎಣಿಕೆ ಏಜೆಂಟರು ಅವರಿಗೆ ನಿಗದಿಪಡಿಸಿದ ಕೌಂಟರುಗಳಿಗೆ ಮಾತ್ರ ಪ್ರವೇಶಿಸಬೇಕು ಎಂದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತ ನಾಗೇಶ, ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಇಂಜಿನೀಯರ್ ವಿರೂಪಾಕ್ಷ ಯಮನಕನಮರಡಿ, ಎನ್ ಐ ಸಿ ಜಿಲ್ಲಾ ಅಧಿಕಾರಿ ಮೀನಾಕುಮಾರಿ ಮತ್ತಿತರರು ಇದ್ದರು.

       ಮತ ಎಣಿಕೆ ಕೇಂದ್ರಕ್ಕೆ ಭೇಟಿ, ಸಭೆಯ ನಂತರ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು  ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಮತ ಎಣಿಕೆ ಕೇಂದ್ರ, ಪ್ರವೇಶ, ವಾಹನ ನಿಲುಗಡೆ ಸ್ಥಳಗಳನ್ನು ಪರಿಶೀಲಿಸಿದರು.