ತಂಬಾಕು ಮುಕ್ತ ಜಿಲ್ಲೆಯಾಗಿಸಲು ಸಮನ್ವಯತೆ ಅಗತ್ಯ

ಧಾರವಾಡ.16: ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ  ಮತ್ತು ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಕಂಡು ಬಂದಲ್ಲಿ  ನಿಯಮಾನುಸಾರ ದಂಡ ವಿಧಿಸಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತನಿಖಾ ದಾಳಿಗಳನ್ನು ಕೈಗೊಳ್ಳಲು ಮತ್ತು  ಧಾರವಾಡ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು. 

ಅವರು ನಿನ್ನೆ (ಮೇ.15) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

 ನಗರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಶಾಲಾ, ಕಾಲೇಜು, ಆಸ್ಪತ್ರೆ, ಬಸ್ನಿಲ್ದಾಣ ಮತ್ತು ಸಕರ್ಾರಿ ಕಚೇರಿಗಳ ಆವರಣದಲ್ಲಿ ತಂಬಾಕು ಸೇವನೆಯನ್ನು ನಿಷೇಧಿಸಲಾಗಿದ್ದು, ಈ ಕುರಿತ ಜಾಗೃತಿಗಾಗಿ ತಂಬಾಕು ಸೇವನೆಯಿಂದ ಆಗುವ ಹಾನಿ  ಮತ್ತು ವಿಧಿಸುವ ದಂಡದ ಕುರಿತು ಮಾಹಿತಿ ಫಲಕಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು. 

         ಬರುವ ಮೇ 31 ರಂದು ಜಿಲ್ಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ವಿವಿಧ ರೀತಿಯ ಜನಜಾಗೃತಿ ಹಾಗೂ ಮಾಹಿತಿ ಶಿಬಿರದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು

       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಆರ್.ಎಮ್. ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೋಟ್ಪಾ ಕಾಯ್ದೆಯ ಯಶಸ್ವಿ ಅನುಷ್ಠಾನಕ್ಕಾಗಿ ತನಿಖಾ ದಾಳಿಗಳನ್ನು ಕೈಗೊಂಡಿರುವ ಕುರಿತು ವಿವರಿಸಿದರು.  2018-19 ನೇ ಸಾಲಿನಲ್ಲಿ   ಪ್ರಕರಣಗಳನ್ನು ದಾಖಲಿಸಿ ರೂ.73,400/-ಗಳ ದಂಡವನ್ನು ವಿಧಿಸಲಾಗಿದೆ. ಹಾಗೂ 2019-20 ನೇ ಸಾಲಿನ ಎಪ್ರೀಲ್ ಮತ್ತು ಮೇ ತಿಂಗಳಲ್ಲಿ ಪ್ರಕರಣಗಳನ್ನು ದಾಖಲಿಸಿ ರೂ. 21,780/-ಗಳ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು. 

 ರಾಜ್ಯ ತಂಬಾಕು ಉತ್ಪನ್ನ ಕಂಪನಿಗಳ ಪ್ರತಿನಿಧಿಗಳ ಜೊತೆ ವ್ಯವಹರಿಸುವ ಬಗ್ಗೆ ರಾಜ್ಯ ನಿಯಮಾವಳಿ ಕುರಿತು ವಿವರಿಸಿದರು. ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪಿಸಿ, ತಂಬಾಕಿನ ವ್ಯಸನದಿಂದ ಮುಕ್ತರಾಗಲು ಉಚಿತ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು..

        ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ|| ಸುಜಾತಾ ವೀ ಹಸವೀಮಠ   ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಸುರಕ್ಷತಾ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು, ಬೆಳಗಾವಿ ವಿಭಾಗಿಯ ಸಂಯೋಜಕ ಮಹಾಂತೇಶ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಹಾಜರಿದ್ದರು.