ಕಾರ್ೋರೇಟ್ ಕಂಪನಿ, ಬಂಡವಾಳಗಾರರ ಪರವಾಗಿ 4 ಕಾರ್ಮಿಕ ಕಾಯ್ದೆಗಳ ಜಾರಿಗೆ ಮುಂದಾಗಿರುವ ಮೋದಿ ಸರ್ಕಾರದ ನಡೆ ಖಂಡನೀಯ: ಮಹೇಶ ಹಿರೇಮಠ
Modi government's move to implement 4 labor laws in favor of corporate companies and investors is c
ಗದಗ ಫೆ: 12 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿಸಲು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನಾಗಿ ತರುತ್ತಿರುವುದು ಕಾರ್ೋರೇಟ್ ಕಂಪನಿಗಳ ಮತ್ತು ಬಂಡವಾಳಗಾರರ ಪರವಾಗಿ ಕೆಲಸ ಮಾಡುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಕಾರ್ಮಿಕ ಮುಖಂಡ ಮಹೇಶ ಹಿರಮೇಠ ಹೇಳಿದರು.
ಕೇಂದ್ರ ಸರ್ಕಾರದ ಸಂಹಿತೆಗಳ ರದ್ಧತಿಗೆ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12, ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಿಂದ ಮೆರವಣೆಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ನಡೆದ ಮುಷ್ಕರವನ್ನು ಉದ್ದೇಶಿಸಿ ಅವರು ಮಾತನಾಡಿದರು. ಈಗಾಗಲೇ ಸಾರ್ವಜನಿಕ ಸ್ವತ್ತುಗಳಾದ ವಿದ್ಯುತ್, ದೂರಸಂಪರ್ಕ, ಕಲ್ಲಿದ್ದಲು, ಗಣಿಗಾರಿಕೆ, ರೈಲ್ವೆ, ಹೆದ್ದಾರಿಗಳು, ಬಂದರುಗಳು, ಹಡಗುಕಟ್ಟೆಗಳು, ನಗರಾಭಿವೃದ್ಧಿ, ತೈಲ ಮುಂತಾದವುಗಳನ್ನು ಖಾಸಗಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಇದು ಸಾಲದು ಎಂಬಂತೆ 2026ರಿಂದ 30ರ ತನಕ ?10 ಲಕ್ಷ ಕೋಟಿ ಹಣಗಳಿಕೆಗಾಗಿ ಖಾಸಗಿ ಕಂಪನಿಗಳಿಗೆ ಎಂಎಂಪಿಯನ್ನು ನವೀಕರಿಸಲಾಗಿದೆ ಎಂದು ಕಿಡಿಕಾರಿದರು.
ದೇಶದ ಸೇವಾ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕನಿಷ್ಠ ವೇತನ ಖಾತರಿ ಪಡಿಸುವ ಕಾಯ್ದೆ ಜಾರಿಗೆ ಬರಬೇಕಿದೆ. ಆದರೆ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರುವ ಮುಖಾಂತರ ರೈತರಿಗೆ ಅನ್ಯಾಯ ಎಸಗಲಾಗುತ್ತಿದ್ದು, ಮೇಕ್ ಇನ್ ಇಂಡಿಯಾ ಹೆಸರಿನಲ್ಲಿ ಕಾರ್ಮಿಕರನ್ನು ಸಂಘಟಿತಗೊಳ್ಳದಂತೆ ಹುನ್ನಾರ ಮಾಡುತ್ತಿರುವ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕೇಂದ್ರದ ಮೋದಿ ಸರ್ಕಾರ ಕಾರ್ೋರೇಟ್ ಕಂಪನಿ, ಬಂಡವಾಳಗಾರರ ಪರವಾಗಿ ಕೆಲಸ ಮಾಡುವುದನ್ನು ಕೈಬಿಟ್ಟು ಕಾರ್ಮಿಕರ ಹಿತಕಾಯಬೇಕು ಎಂದರು.
ಸಿಐಟಿಯು ಜಿಲ್ಲಾ ಮುಖಂಡರಾದ ಯಶೋಧ ಬೇಟಗೇರಿ, ಮಾತನಾಡಿ ಕಾರ್ಮಿಕ ವಿರೋಧಿಯಾಗಿ ಪ್ರಕಟಿಸಿರುವ ಕರಡು ನಿಯಮಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು. ಆ ಮೂಲಕ ರಾಜ್ಯದಲ್ಲಿನ ಕಾರ್ಮಿಕರ ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದರು. ನರೇಗಾ ಕಾಯ್ದೆಯಡಿಯಲ್ಲಿ ಖಾತರಿ ಪಡಿಸಲಾದ ಕೆಲಸ, ಕೆಲಸದ ಹಕ್ಕನ್ನು ಕಸಿದುಕೊಳ್ಳುವುದರ ಜೊತೆಗೆ ಗ್ರಾಮೀಣ ಶ್ರಮ ಜೀವಿಗಳ ಕೊಂಡುಕೊಳ್ಳುವ ಸಾಮಾರ್ಥ್ಯ ಕಡಿಮೆ ಮಾಡುವುದು ಮತ್ತು ಕೃಷಿ ಕಾರ್ಮಿಕರ ಮತ್ತು ಇತರೆ ಗ್ರಾಮೀಣ ಕಾರ್ಮಿಕರ ವೇತನವನ್ನು ನಿಗ್ರಹಿಸುತ್ತಿದೆ. ವಿದ್ಯುತ್ಚಕ್ತಿಯನ್ನು ಖಾಸಗೀಕರಿಸಿ ವಿದ್ಯುತ್ ಪ್ರಸರಣ, ವಿತರಣಾ ವ್ಯವಸ್ಥೆಯ ಅನುಷ್ಠಾನ ಮತ್ತು ನಿರ್ವಹಣೆಯನ್ನು ಖಾಸಗಿ ಬಂಡವಾಳಗಾರರಿಗೆ ಕೊಡುವ ಮುಖಾಂತರ ಇದುವರೆಗೂ ವಿದ್ಯುತ್ ರೈತರಿಗೆ ಮತ್ತು ಜನಸಾಮಾನ್ಯರಿಗೆ ಸಬ್ಸಿಡಿ ದರದಲ್ಲಿ ಸಿಗುತ್ತಿದ್ದ ಪ್ರಮುಖ ಸೇವೆಯಿಂದ ಸರ್ಕಾರ ತನ್ನ ಸಾಮಾಜಿಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದರು.
ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಪುರಸಭೆ ಆಡಳಿತ ಅವರ ಬೇಕು ಬೇಡಿಕೆಗಳಿಗೆ ಮತ್ತು ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಬೀದಿಬದಿ ವ್ಯಾಪಾರಿಗಳ ಸಂಘಟಿತ ಹೋರಾಟದಿಂದ ದೇಶದಲ್ಲಿ ಕಾನೂನು ಮತ್ತು ನೀತಿ ಜಾರಿಗೆ ಬಂದಿದೆ. ಈ ಕಾನೂನು ಜಾರಿಗೆ ಬಂದಿರುವುದರಿಂದ ಬೀದಿಬದಿ ವ್ಯಾಪಾರಿಗಳು ಘನತೆಯಿಂದ ಬದುಕುತ್ತಿದ್ದಾರೆ. ಬೀದಿಬದಿ ವ್ಯಾಪಾರಸ್ಥರನ್ನು ಹತ್ತಿಕ್ಕುವ ಮೂಲಕ ನಿರಂತರ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಾಗವಾಗಿ ಇಡೀ ದೇಶದ ತುಂಬೆಲ್ಲಾ ಕಾರ್ಮಿಕ ವರ್ಗವು ಉತ್ಪಾದನೆಯನ್ನು ನಿಲ್ಲಿಸಿ ಈ ಮುಷ್ಕರದಲ್ಲಿ ಪಾಲ್ಗೊಂಡಿವೆ ಎಂದರು. ಈ ಕೂಡಲೇ ಕೃಷಿ-ಕೂಲಿಕಾರರ, ಕಾರ್ಮಿಕರ ವಿರೋಧಿಯಾಗಿರುವ 4 ಕಾನೂನುಗಳನ್ನು ರದ್ದುಪಡಿಸಿ ರೈತರ ಹಿತ ಕಾಯಬೇಕು ಎಂದು ಆಗ್ರಹಿಸಿದರು.
ಈ ವೇಳೆ ಗ್ರಾಮ ಪಂಚಾಯತ ನೌಕರರ ಮುಖಂಡ ಬಸವರಾಜ ಮುಳಗುಂದಿ, ಅಂಗನವಾಡಿ ಸುಮಾ ಛಲವಾದಿ, ರುದ್ರ್ಪ ಕಂದಗಲ್ಲ, ಅಜಯ ಹಿರೇಮಠ, ಮಾರುತಿ ಚಿಟಗಿ, ಎಸ್,ಎಫ್,ಐ ಮುಖಂಡ ಗಣೇಶ ರಾಠೋಡ ಮಾತನಾಡಿದರು. ದಲಿತ ಸಂಘರ್ಷ ಮುಖಂಡರು ಕ್ರಾಂತೀಗೀತೆ ಹಾಡಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಮನವಿ ಸ್ವೀಕರಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸುಶೀಲಾ ಛಲವಾದಿ ಮಾತನಾಡಿದರು. ಹೊರಗುತ್ತಿಗೆ ನೌಕರರ ಸಂಘದ ಪ್ರವೀಣ, ಶಹನಾಜ ಸೇರಿದಂತೆ ಬಿಸಿಯೂಟ ನೌಕರರ ಸಂಘ, ಆಶಾ ನೌಕರರ ಸಂಘ, ಕಟ್ಟಡ ಕಾರ್ಮಿಕರ, ಗ್ರಾಪಂ ನೌಕರರು, ಅಂಗನವಾಡಿ, ವಿದ್ಯಾರ್ಥಿ-ಯುವಜನ ಸಂಘಟನೆ, ದೇವದಾಸಿ ಮಹಿಳಾ ಸಂಘಟನೆ, ಕೆ.ಪಿಆರ್‌ಎಸ್ ಸೇರಿದಂತೆ ಸಾಮೂಹಿಕ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 