ನನ್ನನ್ನು ಅತಿ ಹೆಚ್ಚು ಟೀಕಿಸಿದವರಿಗೆ ಮೋದಿ, ಶಾ ಬಹುಮಾನ ನೀಡುವುದಾಗಿ ಹೇಳಿರಬೇಕು: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು,22  ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ,  ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು  ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂಬ ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಈ ರೀತಿ ಸಿದ್ದರಾಮಯ್ಯ ತಿವಿದಿದ್ದಾರೆ. ಬಿಜೆಪಿ ನಾಯಕರಾದ ಡಿ.ವಿ.ಸದಾನಂಗ ಗೌಡ, ವಿ.ಸೋಮಣ್ಣ ಸೇರಿದಂತೆ ಇತರ ನಾಯಕರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಟೀಕಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಇಂದು ಬೆಂಗಳೂರಿನಲ್ಲಿ ಪಕ್ಷದ ಅಭ್ಯಥರ್ಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.