ಧಾರವಾಡ 28: ಸರ್ಕಾ ರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ (ಎಸ್.ಸಿ.ಪಿ) ಮತ್ತು ಗಿರಿಜನ ಉಪಯೋಜನೆ (ಟಿ.ಎಸ್.ಪಿ) ಕಾರ್ಯಕ್ರಮ ಜಾರಿಗೊಳಿಸಿದೆ. ಎಲ್ಲಾ ಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳಡಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ನವೆಂಬರ್ ಅಂತ್ಯದವರೆಗೆ ವಿವಿಧ ಇಲಾಖೆಗಳ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆ , ಕೆಎಂಎಫ್, ಕನರ್ಾಟಕ ನೀರಾವರಿ ನಿಗಮ, ಕನರ್ಾಟಕ ರಾಜ್ಯ ಹಣಕಾಸು ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ ಮತ್ತಿತರ ಇಲಾಖೆಗಳು ಕಳೆದ ಸಾಲಿನ ಪ್ರಗತಿ ಕ್ರೋಢೀಕರಿಸಿ ಪ್ರಸಕ್ತ ಸಾಲಿನಲ್ಲಿ ಶೇಕಡಾ ನೂರರಷ್ಟು ಸಾಧನೆ ದಾಖಲಿಸಿರುವಿರಿ, ಇದು ಸರಿಯಾದ ಕ್ರಮವಲ್ಲ ಪ್ರಸಕ್ತ ಸಾಲಿನ ಗುರಿ ಮತ್ತು ಸಾಧನೆ ವಿವರಗಳನ್ನು ಪ್ರತ್ಯೇಕವಾಗಿ ಒದಗಿಸಬೇಕು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 22.99 ಕೋಟಿ ರೂ.ಗಳ ಆರ್ಥಿ ಕ ಗುರಿಯಲ್ಲಿ ಈವರೆಗೆ ಕೇವಲ 2.63 ಕೋಟಿ ರೂ.ಖಚರ್ು ಮಾಡಿ ಶೇ.23 ರಷ್ಟು ಮಾತ್ರ ಸಾಧನೆ ಮಾಡಲಾಗಿದೆ.
ಭೌತಿಕ ಗುರಿ ತಲುಪಲು ಸಾಧ್ಯವಾಗದಿದ್ದರೆ ಕೂಡಲೇ ಸಕರ್ಾರಕ್ಕೆ ಪತ್ರ ಬರೆದು ಬಜೆಟ್ ಪೂರ್ವದಲ್ಲಿಯೇ ಮಾಹಿತಿ ನೀಡಬೇಕೆಂದು ಸೂಚಿಸಿದರು. ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದಲ್ಲಿ ಲಭ್ಯವಿರುವ ಅನುದಾನವನ್ನು ಹುಬ್ಬಳ್ಳಿ ಜಗದೀಶ ನಗರದಲ್ಲಿರುವ ಸಮಸ್ಯೆಗಳ ನಿಮರ್ೂಲನೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಯು ಪರಿಶಿಷ್ಟರೂ ಸೇರಿದಂತೆ ಒಟ್ಟು ಸಮಾಜದ ಅಭಿವೃದ್ದಿ ಕೈಗೊಳ್ಳಲು ವರದಾನವಾಗಿದೆ, ಅಧಿಕಾರಿಗಳು ಮನಃಪೂರ್ವಕವಾಗಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇ ಶಕ ಎನ್.ಆರ್.ಪುರುಷೋತ್ತಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಲೋಕೋಪಯೋಗಿ ಕಾರ್ಯನಿವರ್ಾಹಕ ಇಂಜಿನಿಯರ್ ವಿರೂಪಾಕ್ಷಪ್ಪ ಯಮಕನಮರಡಿ, ಕೈಗಾರಿಕಾ ಉಪ ನಿರ್ದೇ ಶಕ ಮೋಹನ ಭರಮಕ್ಕನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಗಜಾನನ ಮನ್ನಿಕೇರಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಪ್ರಗತಿವಿವರ ನೀಡಿದರು.