ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ಜನರ ನಿರೀಕ್ಷಿಸುವ ವಿಷಯ ಚಚರ್ಿಸಲು ಮೋದಿ ಮನವಿ
ನವದೆಹಲಿ: ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳು ಸಹಕರಿಸುವಂತೆ ಪ್ರಧಾನಿ ನರೇಂದ್ರಮೋದಿ ಮನವಿ ಮಾಡಿದ್ದಾರೆ.
ಅಧಿವೇಶನ ಹಿನ್ನೆಲೆಯಲ್ಲಿ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರಮೋದಿ, ಜನರು ತಮ್ಮಿಂದ ನಿರೀಕ್ಷಿಸುತ್ತಿರುವ ವಿಷಯಗಳನ್ನು ಸದನದಲ್ಲಿ ಚಚರ್ಿಸುವಂತೆ ಪ್ರಧಾನಿ ಎಲ್ಲಾ ನಾಯಕರಿಗೂ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದರು. ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಕಲಾಪ ಸುಗಮವಾಗಿ ಸಾಗಲು ಬೆಂಬಲ ಕೋರುವುದಾಗಿ ಎಲ್ಲಾ ಪಕ್ಷಗಳು ತಿಳಿಸಿವೆ . ಕಲಾಪಕ್ಕೆ ಪ್ರತಿಪಕ್ಷಗಳು ಬೆಂಬಲ ನೀಡುವ ಬಗ್ಗೆ ಸಕರ್ಾರ ವಿಶ್ವಾಸ ಇಟ್ಟುಕೊಂಡಿದೆ .ಎಂದು ಅನಂತ್ ಕುಮಾರ್ ತಿಳಿಸಿದರು. ಸಭೆಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ನೀಡದೆ ಇರುವ ವಿಷಯವನ್ನು ಪ್ರತಿಪಕ್ಷಗಳು ಪ್ರಸ್ತಾವಿಸಿದವು. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಸಂಬಂಧ ಸದನದಲ್ಲಿ ಸಕರ್ಾರ ಸೂಕ್ತ ಭರವಸೆ ನೀಡುವವರೆಗೂ ಸುಗಮ ಕಲಾಪಪಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್ ಎಚ್ಚರಿಕೆ ನೀಡಿದರು. ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿದ್ದು, ವೈದ್ಯರ ಸೂಚನೆ ಮೇರೆಗೆ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಗೃಹ ಸಚಿವ ರಾಜನಾಥ್ ಸಿಂಗ್, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾಜರ್ುನ ಖಗರ್ೆ ಮತ್ತಿತರ ನಾಯಕರು ಸರ್ವ ಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದರು.
ದೆಹಲಿ ಸಕರ್ಾರದ ಕಾರ್ಯನಿರ್ವಹಣೆಯಲ್ಲಿ ಕೇಂದ್ರಸಕರ್ಾರದ ಹಸ್ತಕ್ಷೇಪದ ಬಗ್ಗೆ ಎಎಪಿ ಮುಖಂಡ ಸಂಜಯ್ ಸಿಂಗ್ ಸರ್ವ ಪಕ್ಷ ಸಭೆಯಲ್ಲಿ ಪ್ರಸ್ತಾಪಿಸಿದರು. ನಂತರ ಪ್ರಧಾನಿ ನರೇಂದ್ರಮೋದಿ ಎಲ್ಲಾ ವಿಷಯವನ್ನು ಮುಂಗಾರು ಅಧಿವೇಶನದಲ್ಲಿ ಚಚರ್ಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.
ಅವಿಶ್ವಾಸ ನಿರ್ಣಯ ಸೂಚನೆಯನ್ನು ಕಾರ್ಯ ಕಲಾಪ ಪಟ್ಟಿಯಲ್ಲಿ ಸೇರಿಸುವಂತೆ ಟಿಡಿಪಿ ಸಂಸದ ಶ್ರೀನಿವಾಸ್ ಕೆಸಿನೆನಿ ಲೋಕಸಭಾ ಕಾರ್ಯದಶರ್ಿಗೆ ಪತ್ರ ಬರೆದಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 