ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್

More than 2500 baby sea turtles have been released into the sea so far: Deputy Conservator of Fores

ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್ 

ಕಾರವಾರ  14:  ಕಾರವಾರ ಅಂಕೋಲಾ ವಿಭಾಗದಲ್ಲಿ ಈ ವರ್ಷ ಇದುವರೆಗೆ 2500  ಕ್ಕೂ ಅಧಿಕ  ಆಲಿವ್ ರಿಡ್ಲೆ ಕಡಲಾಮೆಗಳನ್ನು ಸಮುದ್ರಕ್ಕೆ ಬಿಡಲಾಗಿದ್ದು,  111 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ.  ಕಳೆದ ವರ್ಷ 188 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್ ತಿಳಿಸಿದರು. ಅವರು ಶುಕ್ರವಾರ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ  ಸಮಾರು 150 ಆಲಿವ್ ರಿಡ್ಲೆ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತನಾಡಿದರು. ಪ್ರಸ್ತುತ ಎರಡು ಗೂಡುಗಳಿಂದ 152 ಮೊಟ್ಟೆಗಳಿಂದ 149 ಮರಿಗಳು  ಹೊರಬಂದಿದ್ದು,  ಇದು ಉತ್ತಮ ಬೆಳವಣಿಗೆಯಾಗಿದೆ. ಮೊಟ್ಟೆಯಿಂದ ಹೊರಬಂದ ಸಂರಕ್ಷಣೆ ಮಾಡಿದ ಕಡಲಾಮೆ ಮರಿಗಳನ್ನು 51 ದಿನದ ನಂತರ ಸಮುದ್ರಕ್ಕೆ ಇಂದು ಬಿಡಲಾಗಿದೆ. ಕಾರವಾರ ವಿಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೋಸ್ಟಲ್ ಮರೈನ್ ಸೇಲ್ ಸ್ಥಾಪಿಸಿಲಾಗಿದ್ದು, ಇದರಿಂದ ಕಡಲಾಮೆಗಳ ಗೂಡುಗಳ ಮತ್ತು ಮೊಟ್ಟೆಗಳ ರಕ್ಷಣೆ ಮಾಡಿ, ಮರಿಗಳನ್ನು ಪೋಷಣೆ  ಮಾಡಿ ಸಮುದ್ರಕ್ಕೆ ಬಿಡಲಾಗುತ್ತದೆ ಎಂದರು. ಹೊನ್ನಾವಾರದಲ್ಲಿ ಕಳೆದ ವರ್ಷ ಸುಮಾರು 150 ಕಡಲಾಮೆ ಗೂಡುಗಳನ್ನು ಸಂರಕ್ಷಣೆ ಮಾಡಲಾಗಿತ್ತು. ಈ ವರ್ಷ ಕೂಡ ಅಲ್ಲಿ ಸುಮಾರು 200 ಗೂಡುಗಳನ್ನು ರಕ್ಷಣೆ ಮಾಡಲಾಗಿದೆ. ಪ್ರತಿವರ್ಷ ಕಾರವಾರ ಮತ್ತು ಹೊನ್ನಾವರದಲ್ಲಿ ಪ್ರತ್ಯೇಕವಾಗಿ ಸುಮಾರು 10,000 ಕಡಲಾಮೆ ಮೊಟ್ಟೆಗಳನ್ನು ರಕ್ಷಣೆ ಮಾಡಿ ಹೊರಬಂದ ಮರಿಗಳನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಎಂದರು. ಸಮುದ್ರ ತೀರದಲ್ಲಿ ಕಡಲಾಮೆಗಳ ಮೊಟ್ಟೆಗಳು ಇರುವುದು ಕಂಡು ಬಂದರೆ, ಈ ಗೂಡುಗಳ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಹಾಗೂ ತಂದು ಕೊಟ್ಟವರಿಗೆ ಒಂದು ಸಾವಿರ ರೂಗಳನ್ನು ಪ್ರೋತ್ಸಾಹಧನವನ್ನು ನೀಡಲಾಗುತ್ತಿದ್ದು, ಇದುವರೆಗೆ ರೂ.1 ಲಕ್ಷಕ್ಕೂ ಅಧಿಕ ಮೊತ್ತದ ಪ್ರೋತ್ಸಾಹಧನವನ್ನು ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಕಾರವಾರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಡಿ.ನಾಯಕ್, ವಲಯ ಅರಣ್ಯಾಧಿಕಾರಿ ಕಿರಣ್ ಮನೋ ಆಚಾರ್ಯ ಮತ್ತು ಸಾರ್ವಜನಿಕರು ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೇಗಳ ಪ್ರತಿನಿಧಿಗಳು ಭಾಗವಹಿಸಿದ್ದರು.