ಮಕ್ಕಳ ಬೆಳವಣಿಗೆಯಲ್ಲಿ ತಾಯಿ ಪಾತ್ರ ಮುಖ್ಯ
Mother's role is important in children's development
ಇಂಡಿ 21: ಮಕ್ಕಳ ಬೆಳವಣಿಗೆಯಲ್ಲಿ ತಾಯಿ ಪಾತ್ರ ಅತಿ ಮುಖ್ಯವಾಗಿದೆ.ಮನೆ ಮೊದಲು ಪಾಠ ಶಾಲೆ ಮೊದಲು ಗುರು ಎಂದು ಆಲಮೇಲದ ಚಂದ್ರಶೇಖರ ಶಿವಾಚಾರ್ಯರು ಹೇಳಿದರು.ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಗುರು ರಾಚೋಟೇಶ್ವರ ವಿದ್ಯಾ ವಿಕಾಸ ಸಂಸ್ಥೆಯ ಶಾಲೆಯು 11 ನೇ ವಾರ್ಷಿಕೋತ್ಸವ ಹಾಗೂ ಹತ್ತನೇ ತರಗತಿಗಳ ಬೀಳ್ಕೊಡ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮುಳವಾಡದ ಶ್ರೀಗಳು ಮಾತನಾಡಿ ಟಿ.ವಿ.ಮತ್ತು ಮೊಬೈಲ್ ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಮಕ್ಕಳನ್ನು ಇವುಗಳ ದಾಸರಾಗದಂತೆ ನೋಡಿಕೊಂಡು ಅವರಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ದೇಶಭಕ್ತಿಯನ್ನು ಕಲಿಸಿಕೊಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷ ಬ್ರ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿ ಮಾತನಾಡಿದ ಅವರು ನಮ್ಮ ಸಂಸ್ಥೆಯಲ್ಲಿ ಕಲಿಯು ಮಕ್ಕಳು ರೈತರ ಹಾಗೂ ಬಡವರ ಮಕ್ಕಳೆ ಇದ್ದಾರೆ ಇದನ್ನು ಮನಗೊಂಡು 2026-27 ನೇ ಸಾಲಿನಿಂದ ಶಾಲೆಗೆ ಬರುವ ಮಕ್ಕಳಿಗೆ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಕಾಮಗೊಂಡ ಅವರು ಶ್ರೀ ಗುರು ರಾಚೋಟೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ನಮ್ಮನು ಕರೆಸಿ ಸನ್ಮಾನಿಸಿ ಗೌರವಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಂಬಾ ಗ್ರಾಮದ ಕಾಂಗ್ರೆಸ್ ಮುಖಂಡರಾದ ಅಪ್ಪು ಕಲ್ಲೂರ ನ್ಯಾಯವಾದಿ ಎಸ್ ಎಲ್ ನಿಂಬರಿಮಠ ಹಾಗೂ ಸಿದ್ದು ಕಪ್ಪೆನವರ ಸೇರಿದಂತೆ ಅನೇಕರು ಮಾತನಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಬಾಬುಸಾಹುಕಾರ ಮೇತ್ರಿ ಚಂದ್ರಶೇಖರ ರೂಗಿ ಹಣಮಂತರಾಯ ಮಿರ್ಜಿ ಅಶೋಕ ಮಿರ್ಜಿ ರಾಜು ಧಡೇದ ರಾಮೇಗೌಡ ಪಾಟೀಲ ಮಾದೇವಪ್ಪ ಗೊಳ್ಳಗಿ ಈರಣ ರೂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 