ಶ್ರೀ ಸಿದ್ದೇಶ್ವರ ಜಾತ್ರೆಗೆ ಅವಶ್ಯಕ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಚನೆ

ಲೋಕದರ್ಶನ ವರದಿ

ವಿಜಯಪುರ 09:ಇದೇ ಜನೇವರಿ 10 ರಿಂದ 15ರವರೆಗೆ ತೊರವಿ ಗ್ರಾಮದಲ್ಲಿ ನಡೆಯಲಿರುವ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು, ಅವಶ್ಯಕ ಆರೋಗ್ಯ ಸೇವೆ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ (ಯತ್ನಾಳ) ಅವರು ಸೂಚನೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿಂದು ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆ ಅಂಗವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚಚರ್ಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತ್ರೆಯ ಸಂದರ್ಭದಲ್ಲಿ  ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ರೋಗ ರುಜಿನಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಚಳಿಗಾಲ ಇರುವ ಹಿನ್ನಲೆಯಲ್ಲಿ ಅಸ್ತಮಾ ರೋಗಿಗಳ ಚಿಕಿತ್ಸೆಗೆ ವಿಶೇಷ ಗಮನ ನೀಡಬೇಕು.  ಹಾಗೂ ರೈತರ ಆರೋಗ್ಯಕ್ಕೆ ಮತ್ತು ಭಕ್ತಾದಿಗಳ ಅನುಕೂಲಕ್ಕೆ ಸೂಕ್ತ ಆರೋಗ್ಯ ಸೇವೆ ಕಲ್ಪಿಸಬೇಕು. ದಿನದ 24 ಗಂಟೆಗಳ ಕಾಲ ಸೇವೆ ಕಲ್ಪಿಸಲು ಶಿಫ್ಟ್ ಆಧಾರದ ಮೇಲೆ ವೈದ್ಯರು ಹಾಗೂ ನಸರ್್ಗಳನ್ನು ನಿಯೋಜಿಸಬೇಕು. ಈ ಬಾರಿ ತೀವ್ರ ಚಳಿಗಾಲ ಇರುವುದರಿಂದ ಪಶು ಸಂಗೋಪನಾ ಇಲಾಖೆಯಿಂದ ಜಾನುವಾರುಗಳ ಆರೋಗ್ಯ ಚಿಕಿತ್ಸೆಗೆ ಅವಶ್ಯಕ ಗಮನ ನಿಡಬೇಕು ಎಂದು ಹೇಳಿದರು. 

ಜಾತ್ರೆಯ ಸಂದರ್ಭದಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್, ಟ್ರಾಫಿಕ್ ನಿರ್ವಹಣೆ,  ಮಹಾನಗರ ಪಾಲಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ, ಕೆಎಸ್ಆರ್ಟಿಸಿ ಮೂಲಕ ತೊರವಿ ಜಾತ್ರೆ ಸ್ಥಳಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ, ಅಗ್ನಿ ಶಾಮಕ ಇಲಾಖೆಯಿಂದ ಸೂಕ್ತ ಸುರಕ್ಷತಾ ವ್ಯವಸ್ಥೆ,  ವಿದ್ಯುತ್ ಇಲಾಖೆಯಿಂದ ವಿದ್ಯುತ್ ವ್ಯವಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕೃಷಿ, ತೋಟಗಾರಿಕೆ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲು ತಿಳಿಸಿದರು. 

ಅದರಂತೆ ವಿವಿಧ ಸ್ಪಧರ್ಾಳುಗಳಿಗೆ ನೀಡಲಾಗುವ ಬಹುಮಾನ ವಿತರಣೆ ಸೇರಿದಂತೆ ಇನ್ನೀತರ ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ಅವರು ಸೂಚಿಸಿದರು. ಒಟ್ಟಾರೆ ಜಾತ್ರೆಯು ಅಚ್ಚುಕಟ್ಟಾಗಿ  ನಡೆಯುವಂತೆ ನೋಡಿಕೊಳ್ಳಬೇಕು. ಸಕರ್ಾರದ ವಿವಿಧ ಇಲಾಖೆಗಳು ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ, ವ್ಯಾಪಾರಸ್ಥೆ ವಾಣಿಜ್ಯೋದ್ಯಮಿಗಳ ಸಂಘಗಳು, ಜಾತ್ರೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಜನರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾ ವಹಿಸಲು ತಿಳಿಸಿದರು. 

ಸಭೆಯಲ್ಲಿ ಆರೋಗ್ಯ ಇಲಾಖೆಯಿಂದ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒಳಗೊಂಡ 6 ತಂಡಗಳು, ಜಾನುವಾರುಗಳ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೂರು ತಂಡ, 24 ಗಂಟೆಗಳ ಪೋಲಿಸ್ ಬಂದೋಬಸ್ತ್, ಸಾರಿಗೆ ಇಲಾಖೆಯಿಂದ ಬಸ್ಗಳ ವ್ಯವಸ್ಥೆ ನಿರಂತರ ವಿದ್ಯುತ್ ಸೌಕರ್ಯ, ಮಹಾನಗರ ಪಾಲಿಕೆಯಿಂದ ಸ್ವಚ್ಛತಾ ಕಾರ್ಯ, ಕೃಷಿ ಇಲಾಖೆಯಿಂದ ಯಂತ್ರೋಪಕರಣ ಮತ್ತು ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತು ಪ್ರದರ್ಶನ ಮಳಿಗೆ, ಸಕರ್ಾರದ ಸಾಧನೆಗಳ ವಾತರ್ಾ ಇಲಾಖೆ ಮಳಿಗೆ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಉಪಾಧ್ಯಕ್ಷ ಸುರೇಶ ತಳವಾರ, ಮಹಾನಗರ ಪಾಲಿಕೆ ಆಯುಕ್ತ ಡಾ.ಔದ್ರಾಮ, ಡಿವೈಎಸ್ಪಿ ಅಶೋಕ, ಕುಮಾರಿ ಸಂಯುಕ್ತಾ ಶಿವಾನಂದ ಪಾಟೀಲ, ಎಪಿಎಂಸಿ ಕಾರ್ಯದಶರ್ಿ ರಮೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.