ಮುದಕಪ್ಪ ನೆಲಜೇರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ
Mudakappa Nelajeri presented with the district level best teacher award
ಬಳ್ಳಾರಿ 08: ಕಂಪ್ಲಿ ತಾಲೂಕಿನ ಚಿಕ್ಕ ಜಾಯೀಗನೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಮುದಕಪ್ಪ ನೆಲಜೇರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮುದಕಪ್ಪ ನೆಲಜೇರಿ ಅವರು, ಬೋಧನೆಯಲ್ಲಿ ನವೀನ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ವಿಶೇಷ ಒತ್ತು ನೀಡುತ್ತಾ ಬಂದಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುವಂತೆ ಮಾಡಿದ ಅವರ ಸೇವೆಯನ್ನು ಗುರುತಿಸಿ ಜಿಲ್ಲಾ ಶಿಕ್ಷಣ ಇಲಾಖೆ ಈ ಗೌರವವನ್ನು ನೀಡಿದೆ.
ಶಿಕ್ಷಕರ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯ ರಸಪ್ರಶ್ನೆ ಸ್ಪರ್ಧೆ ಯಲ್ಲಿ ಎರಡು ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಹಾಗೂ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಯಲ್ಲಿ ಭಾಗವಹಿಸಿ ಕ್ರಿಕೆಟ್ ಆಟದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಮುದಕಪ್ಪ ನೆಲಜೇರಿ ಅವರ ಪಾತ್ರ ಮಹತ್ವದ್ದಾಗಿದೆ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅಧಿಕಾರಿಗಳು, ಮುದಕಪ್ಪ ನೆಲಜೇರಿ ಅವರ ಸೇವೆ ಇತರ ಶಿಕ್ಷಕರಿಗೆ ಮಾದರಿಯಾಗಿದೆ ಎಂದು ಪ್ರಶಂಶಿಸಿದರು.
ಈ ಗೌರವ ಲಭಿಸಿರುವುದಕ್ಕೆ ಶಾಲೆಯ ಮುಖ್ಯ ಗುರುಗಳಾದ ಗಾಯತ್ರಿ ದೇವಿ ಬಿ. ಎಂ, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಮುದಕಪ್ಪ ನೆಲಜೇರಿ ಅವರು, ಈ ಗೌರವಕ್ಕೆ ಶಾಲೆಯ ಸಹ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರ ಸಹಕಾರವೇ ಕಾರಣ ಎಂದರು. ಮುಂದಿನ ದಿನಗಳಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವೆನೆಂದು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 