ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ: ಪೂರ್ಣಗೊಳಿಸಲು ಸಿಇಓ ಸೂಚನೆ
Multi-village drinking water supply project: CEO instructs to complete
ಧಾರವಾಡ 13: ಧಾರವಾಡ ಜಿಲ್ಲೆಯ 388 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಡಿಬಿಓಟಿ ಮಾದರಿಯಲ್ಲಿ ಜಾರಿಯಲ್ಲಿರುವ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ನಿನ್ನೆ (ನ.12) ಸಂಜೆ ಸವದತ್ತಿಯ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ ಹಿರೇಉಳ್ಳಿಗೇರಿ ಗ್ರಾಮದಲ್ಲಿ ನಿರ್ಮಿಸಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಜಲ ಶುದ್ಧೀಕರಣದ ಘಟಕದ ಕಾಮಗಾರಿ ಪರೀಶೀಲಿಸಿ, ಮಾತನಾಡಿದರು.
ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಎಲ್ ಆ್ಯಂಡ್ ಟಿ ಕಂಪನಿಯು ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುತ್ತಿದ್ದು, ಇಂಟೇಕ್ ಪಾಯಿಂಟ್, ಪೈಪ್‌ಲೈನ್ ಮಾರ್ಗ ಹಾಗೂ ವಾಟರ್ ಟ್ರಿಟ್‌ಮೆಂಟ್ ಪ್ಲಾಂಟ್‌ಗಳ ನಿರ್ಮಾಣ ಕಾಮಗಾರಿಗಳು ಗುಣಮಟ್ಟದಿಂದ ಆಗಬೇಕು. ಮತ್ತು ಕಾಮಗಾರಿಗಳು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಎಂದು ಅವರು ಹೇಳಿದರು.
ಪ್ರಸ್ತುತ ರೇಣುಕಾ ಜಲಾಶಯದಿಂದ ನೇರವಾಗಿ ನೀರನ್ನು ಪಂಪ್ ಮಾಡುವ ಕಾಮಗಾರಿ ಹಾಗೂ ಜಲ ಶುದ್ಧೀಕರಣ ಘಟಕದ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದೆ. ರಾ ವಾಟರ್ ರೈಜಿಂಗ್ ಮೇನ್‌ನ ಬಾಕಿ ಕೆಲಸಗಳನ್ನು 7 ದಿನಗಳೊಳಗೆ ಹಾಗೂ ಡಬ್ಲ್ಯುಟಿಪಿ ಕಾಮಗಾರಿಗಳನ್ನು 1 ತಿಂಗಳೊಳಗೆ ಪೂರ್ಣಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸವದತ್ತಿ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಭೇಟಿ ನೀಡಿ, ನೀರು ಸರಬರಾಜು ಯೋಜನೆಗೆ ಸಂಬಂಧಿಸಿದ ಪ್ರಸರಣ ರೇಖೆ (ಟ್ರಾನ್ಸ್ಮಿಷನ್ ಲೈನ್) ಕಾಮಗಾರಿಯನ್ನು ಪರೀಶೀಲಿಸಿದರು. ಸಂಬಂಧಿತ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಈ ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಸಿಇಓ ಅವರು ನಿರ್ದೇಶಿಸಿದರು.
ಯೋಜನೆಯ ಕಾರ್ಯಾನುಷ್ಠಾನದಲ್ಲಿ ವೇಗ, ಗುಣಮಟ್ಟ ಹಾಗೂ ಸ್ಥಳೀಯ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು. ಮುಂದಿನ ತಿಂಗಳೊಳಗೆ ಕನಿಷ್ಠ 50 ಹಳ್ಳಿಗಳಿಗೆ ಭಾಗಶಃ ನೀರು ಪೂರೈಕೆ (ಟ್ರಯಲ್ ರನ್) ಪ್ರಾರಂಭಿಸಲು ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾ ಅಭಿಯಂತರರ ಜಗದೀಶ ಪಾಟೀಲ, ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 