ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ

ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ

ಮುಂಡಗೋಡ: ತಾಲೂಕಿನ ಚಿಗಳ್ಳಿ ಹನಮಾಪೂರ ಹಾಗೂ ಹರಗನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ, ಚಿಗಳ್ಳಿ ಗ್ರಾಮದ ನಾಗರಾಜ ಎಂಬುವರ ಕಬ್ಬಿನ ಗದ್ದೆಯೊಂದರಲ್ಲಿ ಚಿರತೆ ಕಂಡಿದೆ ಸಂಜೆಯ ವೇಳೆಗೆ ಕಾಣಿಸಿಕೊಂಡಿದ್ದ ಚಿರತೆ ಸನಿಹದ ಬಾಳೆ ತೋಟದಲ್ಲಿ ಹಾದುಅರಣ್ಯದತ್ತ ಮುಖ ಮಾಡಿದೆ ಎನ್ನಲಾಗಿದೆ. ಇದರಿಂದ ರೈತರು ಆತಂಕಗೊಂಡು ಗದ್ದೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.