ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ 24: ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜ.25 ಮತ್ತು 26 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜ.25 ರಂದು ಬೆಳಿಗ್ಗೆ 06.30 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11.30 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಮಧ್ಯಾಹ್ನ 02 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು.
ನಂತರ ಮಧ್ಯಾಹ್ನ 03 ಗಂಟೆಗೆ ಜಿಲ್ಲಾಡಳಿತನ ಭವನದ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.
ಜ.26 ರಂದು ಬೆಳಿಗ್ಗೆ 08 ಗಂಟೆಗೆ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರೆ್ಣ ಮಾಡುವರು. ಬೆಳಿಗ್ಗೆ 08.10 ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ಸರ್ಕಲ್)ದ 150 ಅಡಿ ಎತ್ತರದ ರಾಷ್ಟ್ರ ಧ್ವಜ ನೆರವೇರಿಸುವರು. ನಂತರ 08.30 ಕ್ಕೆ ಬಳ್ಳಾರಿ ವೈದ್ಯಕೀಯ ಕಾಲೇಜು ಮುಂಭಾಗದ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರೆ್ಣ ಮಾಡುವರು.
ಬಳಿಕ ಬೆಳಿಗ್ಗೆ 09 ಗಂಟೆಗೆ ಬಿಮ್ಸ್ ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರಿ್ಡಸಿರುವ 76 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣಾ ಮತ್ತು ರಾಷ್ಟ್ರಗೀತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.