ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧಿಕಾರ ಸ್ವೀಕಾರ
ಕಂಪ್ಲಿ 24: ಪಟ್ಟಣದ ಪುರಸಭೆ ಕಛೇರಿಯಲ್ಲಿ ಶಾಸಕ ಜೆ.ಎನ್.ಗಣೇಶ್ ಸಮ್ಮುಖದಲ್ಲಿ ನೂತನ ಅಧ್ಯಕ್ಷ ಭಟ್ಟ ಪ್ರಸಾದ್ ಹಾಗೂ ಉಪಾಧ್ಯಕ್ಷೆ ಸುಶೀಲಮ್ಮ ಅವರು ಶುಭ ಶುಕ್ರವಾರದಂದು ಅಧಿಕಾರ ಸ್ವೀಕರಿಸಿದರು.
ಮೊದಲಿಗೆ ಇಲ್ಲಿನ ಕಛೇರಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಕೊಠಡಿಯಲ್ಲಿ ಪೂಜೆ ಸಲ್ಲಿಸಿದ ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗದ್ದುಗೆಯಲ್ಲಿ ಕುಳಿತು, ಕಡತಕ್ಕೆ ಸಹಿ ಹಾಕುವ ಮೂಲಕ ಪದಗ್ರಹಣ ಮಾಡಿದರು.
ತದನಂತರ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಸರ್ವ ಸದಸ್ಯರ ಹಾಗೂ ಅಧಿಕಾರಿ ವರ್ಗಗಳ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲಿನ ಪ್ರತಿಯೊಂದು ವಾರ್ಡ್‌ಗಳಲ್ಲಿರುವ ಕುಂದು ಕೊರತೆಗಳನ್ನು ಆಲಿಸಿ, ಈಡೇರಿಸಿ, ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ನೆಮ್ಮದಿಯ ಬದುಕಿಗೆ ಅಣಿಯಾಗಬೇಕು ಎಂದರು.
ನೂತನ ಅಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ, ಪ್ರತಿಯೊಬ್ಬರ ಸಹಕಾರ ಮತ್ತು ಬೆಂಬಲದಿಂದ ಪುರಸಭೆ ಅಧ್ಯಕ್ಷ ಸ್ಥಾನ ಲಭಿಸಿದ್ದು, ಜನರ ಆಸೆ, ಆಕಾಂಕ್ಷಿಗಳಿಗೆ ತಕ್ಕಂತೆ ಕೆಲಸ ಮಾಡಲಾಗುವುದು. ಪಟ್ಟಣದಲ್ಲಿ ಬೀದಿ ದೀಪ, ಕುಡಿಯುವ ನೀರು, ರಸ್ತೆ, ಸ್ವಚ್ಚತೆ ಸೇರಿದಂತೆ ನಾನಾ ಅಭಿವೃದ್ಧಿಗೊಳಿಸಿ, ಸುಂದರವಾಗಿರುವ ಜತೆಗೆ ಮಾದರಿ ಪಟ್ಟಣವನ್ನಾಗಿ ಮಾಡಲಾಗುವುದು. ಪಕ್ಷಭೇದ ಮರೆತು, ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು
ಇಲ್ಲಿನ ಕೊಠಡಿಯಲ್ಲಿ ಶಾಸಕರಿಗೆ ಸನ್ಮಾನಿಸಿ ಗೌರವಿಸುವ ಜತೆಗೆ ಮುಖಂಡರು, ಕಾರ್ಯಕರ್ತರು, ಸಂಘ-ಸಂಸ್ಥೆಯವರು ಬಂದು, ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಕೆ.ದುರುಗಣ್ಣ, ಸದಸ್ಯರಾದ ಕೆ.ಎಸ್.ಚಾಂದ್‌ಬಾಷಾ, ಎಂ.ಹೊನ್ನೂರವಲಿ, ವೀರಾಂಜನೇಯಲು, ಎಂ.ಉಸ್ಮಾನ್, ಮೌಲಾ, ಜಿ.ಸುಮಾ, ಗುಡದಮ್ಮ, ನಾಗಮ್ಮ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಬಿ.ನಾರಾಯಣಪ್ಪ, ಕೆ.ಷಣ್ಮುಕಪ್ಪ, ಕರೇಕಲ್ ಮನೋಹರ, ಸೈಯದ್ ಉಸ್ಮಾನ್, ಜಾಫರ್, ಬೂದಗುಂಪಿ ಹುಸೇನ್‌ಸಾಬ್, ಅಕ್ಕಿ ಜಿಲಾನ್ ಸೇರಿದಂತೆ ಅನೇಕರಿದ್ದರು.