ಕೊಟ್ಟ ಮಾತಿನಂತೆ ರಸ್ತೆ ಅಭಿವೃದ್ಧಿಗೆ ಮುಂದಾದ ಪುರಸಭೆ ಅಧಿಕಾರಿಗಳು

ಕೊಟ್ಟ ಮಾತಿನಂತೆ ರಸ್ತೆ ಅಭಿವೃದ್ಧಿಗೆ ಮುಂದಾದ ಪುರಸಭೆ ಅಧಿಕಾರಿಗಳು  Municipal officials proceed with road development, keeping their word

ಲಕ್ಷ್ಮೇಶ್ವರ, ಜು.10: ಪಟ್ಟಣದ ಪುರಸಭೆ ವ್ಯಾಪ್ತಿಯ ಕಲಾಂ ನಗರ ಹಾಗೂ 1ನೇ ವಾರ್ಡ್ನ ಕೌಡೇಶ್ವರ ನಗರದಲ್ಲಿ ಮಳೆಯಿಂದ ರಸ್ತೆಗಳು ಕೆಸರುಗದ್ದೆಯಾಗಿದ್ದು, ಸ್ಥಳೀಯ ನಿವಾಸಿಗಳು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು.  

ಈ ಕುರಿತು ನಿವಾಸಿಗಳ ಮನವಿಗೆ ಸ್ಪಂದಿಸಿದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಹಾಗೂ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ತಾತ್ಕಾಲಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.  

ಅದರಂತೆ ಅಧಿಕಾರಿಗಳು ಕೆಂಪು ಮಣ್ಣು ಹಾಗೂ ಬೋಲ್ಡರ್ ಕಲ್ಲುಗಳನ್ನು ಹಾಕಿ ರಸ್ತೆಯನ್ನು ಸುಗಮಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳ ಸಂಚಾರ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತಿದ್ದು, ಪುರಸಭೆ ಅಧಿಕಾರಿಗಳ ತ್ವರಿತ ಸ್ಪಂದನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.