ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ನ 29 -ಮಹಿಳೆಯೋರ್ವಳನ್ನು ಕೊಲೆ ಮಾಡಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಮಂಜುನಾಥ್ ಅಲಿಯಾಸ್ ಮಂಜ (36) ಎಂಬ ಆರೋಪಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಮಾರ್ಚ್13, 2014ರಂದು ಈತ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಶೋಭಾ ಎಂಬಾಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಸಲ್ಲಿಸಿತು.
ಮಂಜುನಾಥ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 