ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು, ನ 29 -ಮಹಿಳೆಯೋರ್ವಳನ್ನು ಕೊಲೆ ಮಾಡಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. 

ಮಂಜುನಾಥ್ ಅಲಿಯಾಸ್ ಮಂಜ (36) ಎಂಬ ಆರೋಪಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. 

ಮಾರ್ಚ್13, 2014ರಂದು ಈತ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಶೋಭಾ ಎಂಬಾಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ಸಂಪೂರ್ಣ ತನಿಖೆ ನಡೆಸಿ  ನ್ಯಾಯಾಲಯಕ್ಕೆ  ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಸಲ್ಲಿಸಿತು. 

ಮಂಜುನಾಥ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ‌.