ಯುವಕನ ಕೊಲೆ :ಚೀಲದಲ್ಲಿ ಮೃತ ದೇಹ ಪತ್ತೆ
Murder of a young man: Dead body found in a bag
ಲೋಕದರ್ಶನ ವರದಿ
ಹೂವಿನಹಡಗಲಿ 05: ಯುವಕನ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹಾಕಿದ ಪ್ರಕರಣ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಕುರಿ ಕಾಯುವ ಕೆಲಸ ಮಾಡುತ್ತಿದ್ದ ಬೀರೇಶ (25) ಕಳೆದ ಎರಡು ವಾರಗಳಿಂದ ಕಾಣೆಯಾಗಿದ್ದರು. ಬುಧವಾರ ಸಂಜೆ ಬೀರೇಶ ಅವರ ಮನೆಯ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಾಣಿ ಸತ್ತಿರುವ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಗಮನಿಸಿದಾಗ, ಒಂದು ಚೀಲ ಕಂಡು ಬಂದಿದ್ದು, ಅದನ್ನು ತೆರೆದಾಗ ಬೀರೇಶ ಅವರ ದೇಹದ ಭಾಗಗಳು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರು ಹಿರೇಹಡಗಲಿ ಪೊಲೀಸಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್.ಜಾಹ್ನವಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಇತರರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 