ಸಮಾಜದ ಒಟ್ಟಾರೆ ಅಭಿವೃದ್ಧಿಗೆ ನನ್ನ ಶ್ರಮ : ಶಾಸಕ ಡಾ.ಚಂದ್ರು ಲಮಾಣಿ
ಶಿರಹಟ್ಟಿ 05 : ರಸ್ತೆಗಳು, ಚರಂಡಿಗಳು, ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪಗಳು, ಶೌಚಾಲಯಗಳು, ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಶಾಸಕರು ಅಭಿವೃದ್ಧಿಪಡಿಸಿದರೆ, ಅದು ಜನರ ಜೀವನಮಟ್ಟವನ್ನು ಸುಧಾರಿಸುತ್ತದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ತಾಲೂಕಿನ ತೆಗ್ಗಿನಭಾವನೂರ ಗ್ರಾಮದಲ್ಲಿ ಬುಧವಾರ ಕರ್ನಾಟಕ ರೂರಲ್ ಇನ್‌ಪ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಇಲಾಖೆಯಿಂದ ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ಕಾರ್ಯಕ್ಕಾಗಿ ಮುಖ್ಯಮಂತ್ರಿಯ ಪರಿಹಾರದಿಂದ 50 ಲಕ್ಷ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಮಾಡಿ ಮಾತನಾಡಿದರು
ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಂತಹ ಸಾರ್ವಜನಿಕ ಸೇವೆಗಳನ್ನು ನಾವು ಸುಧಾರಿಸಿದ್ದಿವೆ, ಅದು ಜನರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯವನ್ನು ಪಡೆಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.ಈ ವೇಳೆ ಜಾನು ಲಮಾಣಿ, ಶಂಕರ್ ಮರಾಠಿ, ಪ್ರವೀಣ್ ಪಾಟೀಲ್ ,ಬಸವನಗೌಡ ಪಾಟೀಲ್, ಕುಮಾರಸ್ವಾಮಿ ಹಿರೇಮಠ್, ಶಾಂತಪ್ಪ ಮುರುಗಿ, ವಿಜಯಗೌಡ್ ಪಾಟೀಲ್, ಸೋಮು ಚೌಹಾನ್ ಗ್ರಾ ಪಂ ಸದ್ಯಸರು ಇತರರಿದ್ದರು.