ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ
N.V. Hanumanthappa as Vice President of the Provincial Agricultural Cooperative Society
ಲೋಕದರ್ಶನ ವರದಿ
ಕಂಪ್ಲಿ 10: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಗೊಂಡರು. ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಲ್ಲಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ಇತ್ತೀಚೆಗೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ನೂತನ ಉಪಾಧ್ಯಕ್ಷರಾಗಿ ಹನುಮಂತಪ್ಪ ಇವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ(ಬಳ್ಳಾರಿ ಸಹಕಾರ ಇಲಾಖೆ) ಬಿ.ನಾಗರಾಜ ಘೋಷಿಸಿದರು.
ಪ್ರಕ್ರಿಯೆ ವೇಳೆ ಮುಖ್ಯ ಕಾರ್ಯನಿರ್ವಾಹಕ ವಿ.ಮಲ್ಲಿಕಾರ್ಜುನ, ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಎಸ್.ಲಿಂಗಪ್ಪ, ನಿರ್ದೇಶಕರಾದ ರಾಮಾಂಜಿನೇಯ, ಡಿ.ವಿ.ಮಂಜುನಾಥ, ಎಸ್.ವೆಂಕಟೇಶ, ಎನ್.ಮರಿಸ್ವಾಮಿ, ಹೆಚ್.ದಾನಪ್ಪ, ಕೆ.ತಿಮ್ಮಯ್ಯ, ವಲಿಮಸೀದಿ ಇದ್ದರು. ನಂತರ ನೂತನ ಉಪಾಧ್ಯಕ್ಷರಿಗೆ ಮಾಲಾರೆ್ಣಯೊಂದಿಗೆ ಗೌರವಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಹಕಾರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 