ಒಂದಾದ NCP ಬಣಗಳು, ಜಂಟಿ ಪ್ರಣಾಳಿಕೆ ಬಿಡುಗಡೆ
NCP factions unite, release joint manifesto
ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಹಾಗೂ ಅವರ ಸೋದರ ಮಾವ ಶರದ್ ಪವಾರ್ ನಾಯಕತ್ವದ ಎನ್ಸಿಪಿ (ಎಸ್ಪಿ) ಪಕ್ಷಗಳು ಮುಂಬರುವ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದವು.
ಅಜಿತ್ ಪವಾರ್ ಹಾಗೂ ಅವರ ಸೋದರ ಸಂಬಂಧಿ, ಸಂಸದೆಯೂ ಆಗಿರುವ ಎನ್ಸಿಪಿಯ (ಎಸ್ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಜಿಂಟಿ ಪತ್ರಿಕಾಗೋಷ್ಠಿ ನಡೆಸಿ ಪ್ರಾಣಾಳಿಕೆ ಬಿಡುಗಡೆ ಮಾಡಿದರು. 2023ರಲ್ಲಿ ಪಕ್ಷ ಹೋಳಾದ ಬಳಿಕ ಎರಡೂ ಬಣಗಳ ನಡುವೆ ಹೆಚ್ಚುತ್ತಿರುವ ಸಾಮೀಪ್ಯವನ್ನು ಸೂಚಿಸುತ್ತಿತ್ತು.
ಎನ್ಸಿಪಿಯು ಆಡಳಿತರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿದ್ದರೆ, ಎನ್ಸಿಪಿ (ಎಸ್ಪಿ) ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಅಘಾಡಿಯ ಭಾಗವಾಗಿದೆ. ಆದರೆ ಜನವರಿ 15ರಂದು ನಡೆಯುವ ಪುಣೆ ಹಾಗೂ ಪಿಂಪ್ರಿ ಛಿಂಛ್ವಾಡ ಸ್ಥಳೀಯ ಸಂಸ್ಥೆ ಚುನಾವಣೆಗೆ ಎರಡೂ ಪಕ್ಷಗಳು ಕೈಜೋಡಿಸಿವೆ. ಚುನಾವಣಾ ಪ್ರಚಾರದಲ್ಲಿ ಈವರೆಗೂ ದೂರ ಉಳಿದಿದ್ದ ಸುಳೆ ಹಾಗೂ ಎನ್ಸಿಪಿ (ಎಸ್ಪಿ)ಯ ನಾಯಕರು ಈ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅಜಿತ್ ಪವಾರ್, ‘ನಮ್ಮ ಪ್ರಣಾಳಿಕೆಯು ಪುಣೆಯ ಪ್ರಮುಖ ನಾಗರಿಕ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿದೆ’ ಎಂದು ಹೇಳಿದ್ದಾರೆ. ಕುಡಿಯುವ ನೀರು ಸರಬರಾಜು, ಸಂಚಾರ ದಟ್ಟಣೆ ನಿಯಂತ್ರಣ, ಗುಂಡಿ ರಹಿತ ರಸ್ತೆಗಳು, ಸ್ವಚ್ಛತೆ ಹಾಗೂ ಹೈಟೆಕ್ ಆರೋಗ್ಯ ಸೇವೆಗಳು, ಮಾಲಿನ್ಯ ನಿಯಂತ್ರಣ ಹಾಗೂ ಕೊಳೆಗೇರಿ ಪುನರ್ವಸತಿ ಮುಂತಾದ ಆಶ್ವಾಸನೆಗಳನ್ನು ಹೊಂದಿದೆ.
ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಜೊತೆ ಅಧಿಕಾರ ಹಂಚಿಕೊಂಡಿದ್ದರೂ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ, ಪುಣೆ ಹಾಗೂ ಪಿಂಪ್ರಿ ಛಿಂಛ್ವಾಡ ಅಭಿವೃದ್ಧಿಗೆ ಅಗತ್ಯ ಹಣಕಾಸಿನ ನೆರವು ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 