ಗಾಂಧೀಜಿ ಕನಸು ಸಾಕಾರಗೋಳಿಸಲು ಎನ್‌ಎಸ್‌ಎಸ್ ಕಾರ್ಯ ಶ್ಲಾಘನೀಯ
NSS' work in realizing Gandhiji's dream is commendable
ಗಾಂಧೀಜಿ ಕನಸು ಸಾಕಾರಗೋಳಿಸಲು ಎನ್‌ಎಸ್‌ಎಸ್ ಕಾರ್ಯ ಶ್ಲಾಘನೀಯ
ಹಾವೇರಿ 24: ಸಾಮಾಜಿಕ ವ್ಯವಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿಯವರು ಕಂಡ ಕನಸ್ಸನ್ನು ಸಾಕಾರಗೊಳಿಸುವಲ್ಲಿ ಎನ್.ಎಸ್.ಎಸ್. ಘಟಕಗಳು ನಿರಂತರ ಪರಿಶ್ರಮವಹಿಸಿ ಸೇವಾ ಕಾರ್ಯ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಎಚ್. ಜಂಗಮಶೆಟ್ಟಿ ಹೇಳಿದರು.
ಅವರು ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ಹಾಗೂ ಐಕ್ಯುಎಸಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ನಿಮಿತ್ಯ ಜರುಗಿದ ಪೌರ ಪ್ರಣಾಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಾವಿವಿ ಕುಲಸಚಿವ ಡಾ. ಎಸ್. ಟಿ. ಬಾಗಲಕೋಟಿ ಮಾತನಾಡಿ ಉತ್ತಮ ಪರಿಸರ ನಿರ್ಮಾಣ ಕಾರ್ಯದಲ್ಲಿ ಪೌರಕಾರ್ಮಿಕರ ಪಾತ್ರ ಹಿರಿದಾದುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ. ಸಿ. ಕೊಳ್ಳಿ ಮಾತನಾಡಿ ನಮ್ಮ ಕಾಲೇಜು ಪೌರ ಕಾರ್ಮಿಕರನ್ನು ಕರೆದು ಸನ್ಮಾನಿಸಿರುವುದು ಬಹಳಷ್ಟು ಸಂತೋಷವಾಗಿದೆ. ಇಂತಹ ಕಾರ್ಯಗಳು ಸಮಾಜಕ್ಕೆ ದಿಕ್ಸೂಚಿಯಾಗಬಲ್ಲವು ಎಂದು ಹರುಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸುಮಾರು 134 ಜನ ಪೌರ ಕಾರ್ಮಿಕರಿಗೆ ಸನ್ಮಾನಿಸಲಾಯತು ಮತ್ತು ಸಹಕಾರ ನೀಡಿದ ಮಹನೀಯರಿಗೆ ಗೌರವಿಸಲಾಯಿತು.
ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಹಾವಿವಿ ಸಿಂಡಿಕೇಟ್ ಸದಸ್ಯ ಡಾ. ರಮೇಶ ತೆವರಿ, ಹಾವಿವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ. ಸಿ. ಎಸ್. ಕುಮ್ಮೂರ, ಕಾಲೇಜು ಸ್ಥಾನಿಕ ಮಂಡಳಿ ಕಾಯಾಧ್ಯಕ್ಷ ಡಾ. ಎಸ್. ಎಲ್. ಬಾಲೇಹೊಸೂರ, ಸದಸ್ಯರಾದ ಸಿ. ಬಿ. ಹಿರೇಮಠ, ಜೆ. ಎಸ್. ಅರಣಿ, ನಗರಸಭೆ ಪೌರನೌಕರರ ಸಂಘದ ಅಧ್ಯಕ್ಷ ಚಂದ್ರ ಬಿದರಿ, ಹೊರಗುತ್ತಿಗೆ ಪೌರನೌಕರರ ಸಂಘದ ಅಧ್ಯಕ್ಷ ರಾಜು ಮಾಳಗಿ, ಸಂಚಾಲಕ ರಾಜಪ್ಪ ಹೊಸಮನಿ, ಐಕ್ಯುಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ ಉಪಸ್ಥಿತರಿದ್ದರು.
ಆರಂಭದಲ್ಲಿ ತುಂಗಾ ಅವರಿಂದ ಭರತನಾಟ್ಯ ಜರುಗಿತು. ಪದವಿ ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಸರ್ವರನ್ನೂ ಸ್ವಾಗತಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಶಮಂತಕುಮಾರ್ ಕೆ. ಎಸ್. ಪ್ರಾಸ್ತಾವಿಕ ಮಾತನಾಡಿದರು. ಮಣಿಕಂಠ ಗೋಧಮನಿ ಮತ್ತು ವಿದ್ಯಾ ಪಾಟೀಲ ನಿರೂಪಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಶಿವಾನಂದ ಪಾಯಮಲ್ಲೆ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 