ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಾಸಕ್ಕೆ ಎನ್‌ಎಸ್‌ಎಸ್ ಶಿಬಿರ ಪೂರಕ : ಹೇಮಯ್ಯಸ್ವಾಮಿ
ಕಂಪ್ಲಿ:11 ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಾಸಕ್ಕೆ ಎನ್‌ಎಸ್‌ಎಸ್ ಶಿಬಿರ ಪೂರಕವಾಗಿದೆ ಎಂದು ಅಕ್ಕಿ ಗಿರಿಣಿ ಮಾಲಿಕರ ಸಂಘದ ಅಧ್ಯಕ್ಷ ಕೆ.ಎಂ.ಹೇಮಯ್ಯಸ್ಚಾಮಿ ಹೇಳಿದರು.
ಸ್ಥಳೀಯ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದಿಂದ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರ ಗ್ರಾಮ ರಾಜ್ಯದ ಪರಿಕಲ್ಪನೆಯ ಕನಸಿನ ಕೂಸು ರಾಷ್ಟ್ರೀಯ ಸೇವಾ ಯೋಜನೆ. ಇದು ಒಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಇದರ ಮೂಲಕ ಕಾಲೇಜು ವಿದ್ಯಾರ್ಥಿಗಳಲ್ಲಿ ಶ್ರಮ, ಸಮಯಪ್ರಜ್ಞೆ, ಸೇವಾ ಮನೋಭಾವ ಮೂಡುತ್ತದೆ. ಇಲ್ಲಿನ ಅನುಭವಗಳನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುರಿ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.ವಿವಿಎಸ್ ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ ಜಿ.ನಾಯಕ ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡುತ್ತವೆ ಎಂದರು.ವಿ.ಮ.ಪ.ಮ ಪ್ರಾಂಶುಪಾಲ ಮದ್ದಾನಪ್ಪ ಬಿಡನಾಳ ಇವರು ಎನ್‌ಎಸ್‌ಎಸ್ ಶಿಬಿರದ ಧ್ವಜಾರೋಹಣ ನೆರವೇರಿಸಿದರು.
ಉಪನ್ಯಾಸಕಿ ಸುನೀತಾ ಪ್ರತಿಜ್ಞಾವಿಧಿ ಬೋಧಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ವಿಜಯಶಂಕರ, ಲಕ್ಷ್ಮಣನಾಯಕ ಇವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಬಸವರಾಜ ಬಂಡಿ, ಮದರ್ ತೆರೇಸಾ ಪಿಯು ಕಾಲೇಜು ಪ್ರಾಚಾರ್ಯ ಮಹಾಭಲೇಶ್ವರ, ಪತ್ರಕರ್ತ ಬಂಗಿದೊಡ್ಡ ಮಂಜುನಾಥ, ಕಲ್ಮಠ ಪ್ರೌಢಶಾಲೆಯ ಸಹ ಶಿಕ್ಷಣ ಲೋಕೇಶ, ಉಪನ್ಯಾಸಕರಾದ ಉಮಾ ಮಹೇಶ್ವರಿ, ಮಲ್ಲಿಕಾರ್ಜುನ, ಮೇಘರಾಜ, ತಿರುಪತಿ, ಗೋಪಾಲ, ರಾಮಪ್ಪ, ಜಡೆಪ್ಪ, ಶಿಲ್ಪಾ, ಸುಕನ್ಯ, ಸುನೀತಾ ಸೇರಿದಂತೆ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.