ಧಾರವಾಡ 10: ಬೋಧನೆ, ಸಂಶೋಧನೆಯ ಜೊತೆಗೆ ಸಮುದಾಯದ ಅಭಿವೃದ್ಧಿಯು ಉನ್ನತ ಶಿಕ್ಷಣದ ಮುಖ್ಯ ಧ್ಯೇಯಗಳಾಗಿವೆ ಎಂದು ಧಾರವಾಡ ಜಿಲ್ಲಾ ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇ ಶಕ ಡಾ. ಸದಾಶಿವ ಮರ್ಜಿ ಹೇಳಿದರು.
ಅವರು ಕರ್ನಾ ಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶದ ವತಿಯಿಂದ ಕವಿವಿಯ ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ 'ರಾಷ್ಟ್ರ ನಿರ್ಮಾ ಣದಲ್ಲಿ ಎನ್ಎಸ್ಎಸ್ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಸಮುದಾಯದ ಅಭಿವೃದ್ಧಿ ಮತ್ತು ಸಮಾಜದ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಎನ್.ಎಸ್.ಎಸ್ ಎಂಬ ಯೋಜನೆಯನ್ನು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಪ್ರಾರಂಭಿಸಲಾಯಿತು ಎಂದ ಅವರು ಎನ್.ಎಸ್.ಎಸ್ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ವ್ಯಕ್ತಿತ್ವವನ್ನು ಗುರುತಿಸಲು ಒಂದು ಉತ್ತಮ ವೇದಿಕೆಯಾಗಿದ್ದು, ಇಂತಹ ನಾಯಕತ್ವದ ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಕ್ರಿಯಾಶಿಲತೆಯಂತಹ ಗುಣಗಳನ್ನು ಗುರುತಿಸಲು ಸಾಧ್ಯ ಎಂದ ಅವರು ಸಮಾಜದ ಅಭಿವೃದ್ಧಿಗಾಗಿ ದೃಢವಾದ ಮನಸ್ಸಿನೊಂದಿಗೆ ಅರ್ಪಣಾ ಮನೋಭಾವ ಬಹಳ ಮುಖ್ಯ ಎಂದರು. ವಿದ್ಯಾರ್ಥಿ ಗಳು ತಮ್ಮಲ್ಲಿರುವ ಸಾಮಥ್ರ್ಯವನ್ನು ಅರಿತುಕೊಳ್ಳಬೇಕು ಮತ್ತು ಕೀಳಿರಿಮೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಸಾಧಿಸುತ್ತೇನೆ ಎಂಬ ಮನೋಭಾವನೆ ಹೊಂದಬೇಕು ಎಂದು ಸಲಹೆ ನೀಡಿದರು.
ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಜಿ.ಟಿ.ರಾಮಚಂದ್ರಪ್ಪ ಮಾತನಾಡಿ ಮಹಾತ್ಮಾ ಗಾಂಧೀಜಿಯವರ ತತ್ವದ ಆಧಾರದ ಮೇಲೆ ಎನ್.ಎಸ್.ಎಸ್ ಎಂಬ ಪರಿಕಲ್ಪನೆ ಹುಟ್ಟಿಕೊಂಡಿದ್ದು, ಗಾಂಧೀಜಿ ಅವರು ಸಣ್ಣ ಗುಡಿಕೈಗಾರಿಕೆಗಳಿಗೆ ಹೆಚ್ಚು ಪ್ರಾಶ್ಯಸ್ತ ನೀಡಿದ್ದ ಅವರು ಗ್ರಾಮಗಳ ಅಭಿವೃದ್ಧಿಗಾಗಿ ವಿಕೇಂದ್ರಿಕರಣದ ಸೂತ್ರವನ್ನು ಪ್ರತಿಪಾದಿಸಿದ್ದರು ಎಂದರು. ಇಂದು ಅಂಬೇಡ್ಕರ್, ಗಾಂಧಿ ಮತ್ತು ಬಸವಣ್ಣವರ ತತ್ವದ ಆಧಾರದ ಮೇಲೆ ಸಾಮಾಜಿಕ ಅಭಿವೃದ್ಧಿ ಆಗಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕವಿವಿಯ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ವ್ಹಿ.ಎಲ್.ಪಾಟೀಲ್ ಮಾತನಾಡಿ ಉತ್ತಮ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎನ್.ಎಸ್.ಎಸ್ದಲ್ಲಿ ಸ್ವಯಂ ಶಿಸ್ತು ಬಹಳ ಮುಖ್ಯವಾಗಿದ್ದು, ಮುಖ್ಯವಾಗಿ ಇಂದಿನ ವಿದ್ಯಾರ್ಥಿಗಳು ಕೇಳಿಸಿಕೊಳ್ಳುವ ಗುಣವನ್ನು ಬೆಳಸಿಕೊಳ್ಳುವುದರ ಜೊತೆಗೆ ಮನಸ್ಸನ್ನು ನಿಗ್ರಹಿಸಬೇಕೆ ಅಂದಾಗ ಮಾತ್ರ ಗುರಿಯನ್ನು ಸಾಧಿಸಲು ಸಾಧ್ಯ ಎಂದ ಅವರು
ಕಾರ್ಯಕ್ರಮದಲ್ಲಿ ಕವಿವಿಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಂಯೋಜನಾ ಅಧಿಕಾರಿ ಡಾ. ಎಂ.ಬಿ.ದಳಪತಿ ಸೇರಿದಂತೆ ಕರ್ನಾ ಟಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳ ಎನ್.ಎಸ್.ಎಸ್ ಘಟಕಗಳ ಅಧಿಕಾರಿಗಳು ಮತ್ತು 400 ವಿದ್ಯಾರ್ಥಿ ಸ್ವಯಂ ಸೇವಕರು ಹಾಜರಿದ್ದರು.