ನಾಗರೇಖಾ ಮತ್ತು ಲಕ್ಷ್ಮಿಕಾಂತಗೆ ರಾಜ್ಯಮಟ್ಟದ ಸಹೃದಯ ಕಾವ್ಯ ಪ್ರಶಸ್ತಿ
Nagarekha and Laxmikant win state-level Sahridaya Poetry Award
ಲೋಕದರ್ಶನ ವರದಿ
ಸವದತ್ತಿ 12: 2025 ನೇ ಸಾಲಿನಲ್ಲಿ ಪ್ರಕಟವಾದ ಅತ್ಯುತ್ತಮ ಕವನ ಸಂಕಲನಗಳಿಗೆ ತಾಲ್ಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ಗೆ ಎರಡು ಕೃತಿಗಳು ಆಯ್ಕೆಯಾಗಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಗೇಶ್ ಜೆ. ನಾಯಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದಾಂಡೇಲಿಯ ನಾಗರೇಖಾ ಗಾಂವಕರ ಅವರ ‘ಪಾದಕ್ಕೊಂದು ಕಣ್ಣು’ ಕವನ ಸಂಕಲನ ಹಾಗೂ ಹಾವೇರಿಯ ಲಕ್ಷ್ಮಿಕಾಂತ ಮಿರಜಕರ ಅವರ ‘ಖಾಲಿ ಜೋಳಿಗೆಯ ಫಕೀರ’ ಗಜಲ್ ಸಂಕಲನಗಳಿಗೆ ಪ್ರಶಸ್ತಿ ಲಭಿಸಿದೆ.
ಪ್ರತಿಷ್ಠಾನದ ನಾಲ್ಕನೇ ವರ್ಷದ ಸಂಭ್ರಮದಲ್ಲಿ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿತ್ತು. 100 ಕ್ಕೂ ಹೆಚ್ಚು ಕೃತಿಗಳು ಸಲ್ಲಿಕೆಯಾಗಿದ್ದವು. ನಾಡಿನ ಹಿರಿಯ ಸಾಹಿತಿ, ಸಂಶೋಧಕ ಡಾ. ಪಿ. ಜಿ. ಕೆಂಪಣ್ಣವರ ತೀರ್ುಗಾರರಾಗಿದ್ದರು. ಬರುವ ಜೂನ್ ತಿಂಗಳಿನಲ್ಲಿ ಪಟ್ಟಣದಲ್ಲಿ ನಡೆಯುವ ಸಮಾರಂಭದಲ್ಲಿ ಇಬ್ಬರೂ ಕೃತಿಕಾರರಿಗೆ ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಬಸವರಾಜ ಪಟ್ಟಣಶೆಟ್ಟಿ, ಕಾರ್ಯದರ್ಶಿ ರಮೇಶ್ ತಳವಾರ, ಸಂಚಾಲಕರಾದ ಎಸ್. ಬಿ. ಗರಗದ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 