ನಾಗೇಶ್ ನಾಯಕ ಅವರ ‘ಮನುಷ್ಯರಿಲ್ಲದ ನೆಲ’ ಕವನ ಸಂಕಲನ ಬಿಡುಗಡೆ
Nagesh Nayaka's poetry collection 'Manushiya Lada Nela' is released
ನಾಗೇಶ್ ನಾಯಕ ಅವರ ‘ಮನುಷ್ಯರಿಲ್ಲದ ನೆಲ’ ಕವನ ಸಂಕಲನ ಬಿಡುಗಡೆ
ಸವದತ್ತಿ 08 : ಎಸ್ ವ್ಹಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯ ಹಾಗೂ ಸಹೃದಯ ಸಾಹಿತ್ಯ ಪ್ರತಿಷ್ಠಾನದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರ ‘ಮನುಷ್ಯರಿಲ್ಲದ ನೆಲ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎನ್. ಆರ್. ಸವತಿಕರ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಕಾಕದ ವಿಶ್ರಾಂತ ಪ್ರಾಚಾರ್ಯರು, ಜಾನಪದ ತಜ್ಞರಾದ ಡಾ. ಸಿ. ಕೆ. ನಾವಲಗಿ ಕೃತಿ ಬಿಡುಗಡೆ ಮಾಡಲಿದ್ದಾರೆ. ನೇಸರಗಿ ಸರಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಫ್. ಡಿ. ಗಡ್ಡಿಗೌಡರ ಕೃತಿ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವದತ್ತಿಯ ರಂಗ ನಿರ್ದೇಶಕರಾದ ಝಕೀರ್ ನದಾಫ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಧಾರವಾಡದ ಆರ್ಟ್ ಪಾಯಿಂಟ್‌ನ ವಿಠಲ ಬಸಳಿಗುಂದಿ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಹೃದಯ ಸಾಹಿತ್ಯ ಪ್ರತಿಷ್ಠಾನದ ಸಂಚಾಲಕರಾದ ಎಸ್. ಬಿ. ಗರಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 