ಹೈದರಾಬಾದ್, ಏ 26 ರಾಜ್ಯ ಸಕರ್ಾರದ ಕರ್ತವ್ಯ ನಿರ್ವಹಣೆಗೆ ಚುನಾವಣಾ ಆಯೋಗ ಅಡ್ಡಿ ಪಡಿಸಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ಆರೋಪಿಸಿದ್ದಾರೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಚುನಾವಣಾ ಆಯೋಗದ ಅನುಮತಿ ಇಲ್ಲದೇ ಯಾವುದೇ ಪುನರ್ಪರಿಶೀಲನಾ ಸಭೆಯನ್ನು ನಡೆಸುವಂತಿಲ್ಲ. ರಾಜ್ಯದಲ್ಲಿ ಇನ್ನೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ರಾಜ್ಯ ಸಕರ್ಾರದ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ, ಪೊಲೀಸ್ ಇಲಾಖೆಯ ಮುಖ್ಯಸ್ಥರಿಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮಾಹಿತಿ ನೀಡಿ, ಯಾವುದೇ ವಿಷಯಗಳನ್ನು ಮುಖ್ಯಮಂತ್ರಿ ಅವರೊಂದಿಗೆ ಚಚರ್ೆ ಮಾಡಬಾರದು ಎಂದು ಹೇಳಿದ್ದಾರೆ. ಎಲ್ಲವೂ ರಾಜ್ಯ ಸಕರ್ಾರದ ಕರ್ತವ್ಯಕ್ಕೆ ಅಡಚಣೆಯಾಗಿದೆ. ಮಾದರಿ ನೀತಿ ಸಂಹಿತೆಯಲ್ಲಿ ಅಂತಹ ಯಾವುದೇ ನಿಯಮಗಳು ಇಲ್ಲ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಮುಖ್ಯಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದ್ದಾರೆ. ತಪ್ಪು ಮಾಹಿತಿಯನ್ನು ನೀಡಿ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ನಾಯ್ಡು ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಬರೆದಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.