ಧಾರವಾಡ .01: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಧಾರವಾಡ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ರಾಷ್ರೀಯ ಏಡ್ಸ್ ನಿಯಂತ್ರಣ ಜಾಗೃತಿ ಜಾಥಾಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಮತ್ತು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಆರೋಗ್ಯ ಮತ್ತು ಶಿಕ್ಷಣ ಅಧಿಕಾರಿ ಎಲ್.ಎಸ್.ಅಂಬಲಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ. ದೇಶಪಾಂಡೆ ಅವರು ಕಳುಹಿಸಿದ್ದ ಸಂದೇಶ ವಾಚಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಚೈತ್ರ ಶಿರೂರ, ಜಿಲ್ಲಾ ಪಂಚಾಯತ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಪುಡಲಕಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಗಿರಿಧರ ಕುಕನೂರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಚಿಣ್ಣನ್ನವರ.ಆರ್.ಎಸ್., ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಡಾ.ವಿ.ಡಿ.ಕಪರ್ೂರಮಠ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿ ಪಾಟೀಲ, ನವನಗರದ ಡಾ.ಆರ್.ಬಿ.ಪಾಟೀಲ ಕ್ಯಾನ್ಸರ್ ಆಸ್ಪತ್ರೆಯ ಡಾ.ಹಳ್ಳಿಕೇರಿ ಸೇರಿದಂತೆ ಜಿಲ್ಲಾ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಮತ್ತು ವಿವಿಧ ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾಥರ್ಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಜನಜಾಗೃತಿ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ಹಳೆ ಬಸ್ನಿಲ್ದಾಣ, ಜ್ಯುಬಿಲಿ ವೃತ್ತದ ಮೂಲಕ ಮರಳಿ ಆರೋಗ್ಯ ಇಲಾಖೆ ಕಚೇರಿಗೆ ತಲುಪಿತು.