ದಿ. 31ರಂದು ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
National Award for Ambikathanayadatta to be presented on 31st
ಧಾರವಾಡ 23: ಪ್ರತಿ ವರ್ಷದಂತೆ ವರಕವಿ ಡಾ.ದ.ರಾ.ಬೇಂದ್ರೆಯವರ ಜನ್ಮದಿನ 31ನೇ ಜನವರಿ 2026ರಂದು ದ.ರಾ.ಬೇಂದ್ರೆಯವರ ಹೆಸರಿನಲ್ಲಿ ನಾಡಿನ ಶ್ರೇಷ್ಠ ಕವಿ, ವಿಮರ್ಶಕ, ಸಾಹಿತಿಗೆ ನೀಡುತ್ತ ಬಂದಿರುವ “ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ”ಗೆ ಸೃಜನಶೀಲ ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ, ಧಾರವಾಡ ಹಾಗೂ ಹಿರಿಯ ಕವಿ, ಸಾಹಿತಿ ಸತೀಶ ಕುಲಕರ್ಣಿ, ಹಾವೇರಿ ಇವರು ಆಯ್ಕೆಯಾಗಿದ್ದಾರೆ ಎಂದು ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ತಿಳಿಸಿದರು.
ಪ್ರಶಸ್ತಿಯನ್ನು ದಿ. 31ರಂದು ಸಂಜೆ 5.00 ಗಂಟೆಗೆ ಧಾರವಾಡದ ಸಾಧನಕೇರಿ ಡಾ.ದ.ರಾ.ಬೇಂದ್ರೆ ಭವನದಲ್ಲಿ ಏರಿ್ಡಸಿರುವ ವರಕವಿ ಡಾ.ದ.ರಾ.ಬೇಂದ್ರೆಯವರ 130ನೇ ಜನ್ಮದಿನಾಚರಣೆಯಂದು ಪ್ರದಾನ ಮಾಡಲಾಗುವುದು. ಪ್ರಶಸ್ತಿ ಮೊತ್ತ ರೂ.1 ಲಕ್ಷ ನಗದು (ತಲಾ ಐವತ್ತು ಸಾವಿರ), ಪ್ರಶಸ್ತಿ ಫಲಕ, ಫಲ-ಪುಷ್ಪಗಳನ್ನೊಳಗೊಂಡಿರುತ್ತದೆ.
ಬೆಂಗಳೂರಿನ ಖ್ಯಾತ ಸಾಹಿತಿ, ಸಂಸ್ಕೃತಿ ಚಿಂತಕರಾದ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಹಿರಿಯ ಚಿಂತಕರು, ಮಾಜಿ ಸಂಸದರಾದ ಪ್ರೊ. ಐ.ಜಿ. ಸನದಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ ಆಗಮಿಸುವರು. ಅಧ್ಯಕ್ಷತೆಯನ್ನು ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ವಹಿಸುವರು.
ಪ್ರಶಸ್ತಿ ಪುರಸ್ಕೃತ ಪ್ರೊ.ಮಾಲತಿ ಪಟ್ಟಣಶೆಟ್ಟಿ ಅವರ ಕುರಿತು ಸಾಹಿತಿಗಳು ಹಾಗೂ ಟ್ರಸ್ಟ್ ಸದಸ್ಯರಾದ ಡಾ.ಶರಣಮ್ಮ ಗೊರೇಬಾಳ ಹಾಗೂ ಸತೀಶ ಕುಲಕರ್ಣಿ ಅವರ ಕುರಿತು ಹಿರಿಯ ಸಾಹಿತಿಗಳು ಹಾಗೂ ಟ್ರಸ್ಟ್ ಸದಸ್ಯರಾದ ಡಾ. ವಾಯ್. ಎಮ್. ಯಾಕೊಳ್ಳಿ ಅವರು ಅಭಿನಂದನಾ ಪರ ಮಾತನಾಡಲಿದ್ದಾರೆ.
ವಿದುಷಿ ಭಾರ್ಗವಿ ಕುಲಕರ್ಣಿ ಹಾಗೂ ಗಾಯತ್ರಿ ಟೊಣಪಿ ಮತ್ತು ತಂಡದವರು ಡಾ.ದ.ರಾ.ಬೇಂದ್ರೆ ಗೀತ ಗಾಯನ ಪ್ರಸ್ತುತ ಪಡಿಸಲಿದ್ದಾರೆ ಎಂದರು. ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಸದಸ್ಯರಾದ ಡಾ. ವಾಯ್.ಎಮ್.ಯಾಕೊಳ್ಳಿ, ಡಾ.ಅಶೋಕ ಶೆಟ್ಟರ, ಡಾ.ಶರಣಮ್ಮ ಗೊರೇಬಾಳ, ಪ್ರಭು ಕುಂದರಗಿ, ಇಮಾಮಸಾಬ್ ವಲ್ಲೆಪ್ಪನವರ, ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 