ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ಶಿಬಿರ ಕಾರ್ಯಕ್ರಮ
National Cancer Awareness Camp Program
ವಿಜಯಪುರ, 12 : ಮಹಿಳೆಯರ ಆರೋಗ್ಯದಲ್ಲಿ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ಕಾಯಿಲೆಯೆಂದರೆ ಕ್ಯಾನ್ಸರ್. ಇಂದಿನ ಯುಗದಲ್ಲಿ ವಿಶೇಷವಾಗಿ ಗರ್ಭಕಂಠ ಮತ್ತು ಸ್ತನಗಳ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ವಿಜ್ಞಾನಿ ಮೇರಿ ಕ್ಯೂರಿಯ ಜನ್ಮದಿನವನ್ನು ಕಾನ್ಸರ್ ದಿನವನ್ನಾಗಿ ಆಚರಿಸುವ ಮೂಲಕ, ಮಹಿಳೆಯರು ಆರೋಗ್ಯದ ಬಗ್ಗೆ ಜಾಗೃತರಾಗಬೇಕೆಂದು ಡಾ.ಹಿತೇಂದ್ರ ನಾಯಕ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ, ಹಾಗೂ ಎನ್‌ಎಸ್‌ಎಸ್ ಕೋಶ ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಿಗಾಗಿ "ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ಶಿಬಿರ " ವನ್ನು ಉದ್ಘಾಟಿಸಿ ಮಾತನಾಡಿದರು.
ಕ್ಯಾನ್ಸರ್ ಎಂದರೆ ದೇಹದ ಕೋಶಗಳು ನಿಯಂತ್ರಣ ತಪ್ಪಿ ಅತಿಯಾಗಿ ವೃದ್ಧಿ ಪಡುವ ಕಾಯಿಲೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್‌ಗೆ ಹಲವು ಕಾರಣಗಳಿವೆ. ಅಸಮರ್ಕ ಜೀವನಶೈಲಿ, ಅಶುದ್ಧತೆ, ಜನನಾಂಗದ ಸೋಂಕುಗಳು, ಹಾರ್ಮೋನ್ ಅಸಮತೋಲನ, ತಂಬಾಕು ಸೇವನೆ, ಮದ್ಯಪಾನ ಮತ್ತು ಶಾರೀರಿಕ ಚಟುವಟಿಕೆಗಳ ಕೊರತೆ ಇವು ಪ್ರಮುಖ ಕಾರಣಗಳಾಗಿವೆ. ಅಷ್ಟೆ ಅಲ್ಲದೇ ಕ್ಯಾನ್ಸರ್ ಬರದಂತೆ ತಡೆಯಲು ಆರೋಗ್ಯಕರ ಆಹಾರ, ನಿತ್ಯ ವ್ಯಾಯಾಮ, ಸ್ವಚ್ಛತೆ, ಮತ್ತು ತಪಾಸಣೆಗಳು ಅತ್ಯಂತ ಮುಖ್ಯ. ವರ್ಷಕ್ಕೊಮ್ಮೆ ವೈದ್ಯರ ಸಲಹೆಯ ಮೇರೆಗೆ ಗರ್ಭಕಂಠದ ಪರೀಕ್ಷೆ ಮತ್ತು ಸ್ತನ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದರು.
ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯಾಯ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾ ತಹಮಿನಾ ಕೋಲಾರ ನಿರೂಪಿಸಿದರು. ಪ್ರೊ. ಅಶೋಕ ಸುರಪುರ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಪುಷ್ಪಾ ಹೀರೆಮಠ, ಅನಿತಾ ಎ, ಅನಿತಾ ಕಾಳೆ, ಡಾ.ಸುರೇಖಾ ರಾಠೋಡ, ಡಾ.ಭಾಗ್ಯಶ್ರೀ, ಡಾ ಸರೋಜಾ ಸಂತಿ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು ಮತ್ತು ವಸತಿ ನಿಲಯದ ನಿಲಯಪಾಲಕರು ಮತ್ತಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 